ಹೊಸಪೇಟೆ (ವಿಜಯನಗರ): ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿದೆ. ಈ ಕುರಿತು ಈಟಿವಿ ಭಾರತದ ಜೊತೆ ದೂರವಾಣಿ ಕರೆ ಮೂಲಕ ಮಾತನಾಡಿರುವ ಆನಂದ್ ಸಿಂಗ್, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈಟಿವಿ ಭಾರತದೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, "ನಾನು ಎಲ್ಲಿಯೂ ಹೋಗಿಲ್ಲ ಇಲ್ಲೆ ಇರುವೆ. ನಾನೆಲ್ಲಿಯೂ ಹೋಗುತ್ತಿಲ್ಲ. ದೆಹಲಿಗೆ ಹಾಗೂ ಬೆಂಗಳೂರಿಗೆ ಹೋಗುವುದಾದರೆ ಬಹಿರಂಗವಾಗಿ ಹೇಳಿ ಹೋಗುವೆ. ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.