ಬಳ್ಳಾರಿ :ಜಿಲ್ಲಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‍ಸಿಂಗ್ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕುರಿತಂತೆ ಸಚಿವ ಆನಂದ್ ಸಿಂಗ್ ಚರ್ಚೆ - Minister Anand singh latest news
ಶಾಸಕರುಗಳಾದ ಜಿ.ಸೋಮಶೇಖರ ರೆಡ್ಡಿ ಹಾಗೂ ಬಿ.ನಾಗೇಂದ್ರ ಅವರು ಸಲಹೆ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು..

ಬೆಂಗಳೂರಿನ ವಿಕಾಸಸೌಧದಲ್ಲಿರುವ ಸಚಿವರ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಖನಿಜ ನಿಧಿ ಅನುದಾನ, ಕಲ್ಯಾಣ ಕರ್ನಾಟಕ ಅನುದಾನ, ಶಾಸಕರ ಅನುದಾನ ಹಾಗೂ ಮೂಲಸೌಕರ್ಯ ಇಲಾಖೆಯ ಅನುದಾನ ಬಳಸಿ ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಅವರೊಂದಿಗೆ ಸಚಿವ ಆನಂದಸಿಂಗ್ ಅವರು ಸುದೀರ್ಘ ಚರ್ಚಿಸಿದರು.
ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ಸಲಹೆ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು. ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಹಾಗೂ ರಾಬಕೋ ಹಾಲು ಒಕ್ಕೂಟದ ನಿರ್ದೇಶಕ ವೀರಶೇಖರ್ ರೆಡ್ಡಿ ಸೇರಿ ಇತರರಿದ್ದರು.