ಬಳ್ಳಾರಿ:ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಕೋವಿಡ್ - 19 ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ರು.
ಬಳ್ಳಾರಿಯಲ್ಲಿ ಆನಂದ್ ಸಿಂಗ್ ನೇತೃತ್ವದಲ್ಲಿ ಕೋವಿಡ್-19 ಸಭೆ : ಸಭೆಗೆ ಮಾಧ್ಯಮದವರಿಗೆ ನಿರ್ಭಂದ...! - Ballari latest news
ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಕೋವಿಡ್ - 19 ಸಭೆ ನಡೆಸಿದ್ರು. ಈ ವೇಳೆ ಎರಡು ನಿಮಿಷದ ವಿಡಿಯೋ ಅಥವಾ ಪೋಟೋ ತೆಗೆಯಲು ಮಾತ್ರ ಮಾಧ್ಯಮದವರಿಗೆ ಅವಕಾಶ ಕಲ್ಪಿಸಿದ್ದರು.
![ಬಳ್ಳಾರಿಯಲ್ಲಿ ಆನಂದ್ ಸಿಂಗ್ ನೇತೃತ್ವದಲ್ಲಿ ಕೋವಿಡ್-19 ಸಭೆ : ಸಭೆಗೆ ಮಾಧ್ಯಮದವರಿಗೆ ನಿರ್ಭಂದ...! Minister Anand singh](https://etvbharatimages.akamaized.net/etvbharat/prod-images/768-512-6772662-871-6772662-1586764938897.jpg)
ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅವರು ಮೊದಲ ಬಾರಿಗೆ ಕೋವಿಡ್ - 19 ಸಭೆಯನ್ನು ಕರೆದಿದ್ದು, ಆದರೆ ಜಿಲ್ಲಾಡಳಿತ ಕೇವಲ ಎರಡು ನಿಮಿಷದ ವಿಡಿಯೋ ಅಥವಾ ಪೋಟೋ ತೆಗೆಯಲು ಮಾತ್ರ ಮಾಧ್ಯಮದವರಿಗೆ ಅವಕಾಶ ಕಲ್ಪಿಸಿದ್ದರು. ಅದನ್ನು ಮೀರಿದ ಮಾಧ್ಯಮದವರಿಗೆ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಅವರು ಹೊರಗೆ ಹೋಗುವಂತೆ ಸೂಚನೆ ನೀಡಿದ್ರು.
ಸಭೆಯಲ್ಲಿ ಬಳ್ಳಾರಿ ಲೋಕಸಭಾ ಸದಸ್ಯ ವೈ. ದೇವೇಂದ್ರಪ್ಪ, ಶಾಸಕರಾದ ಗಾಲಿ ಸೋಮಶೇಖರರೆಡ್ಡಿ, ಈ. ತುಕಾರಾಂ, ಪಿ.ಟಿ. ಪರಮೇಶ್ವರ ನಾಯ್ಕ, ಎಂ.ಎಸ್. ಸೋಮಲಿಂಗಪ್ಪ, ಅಲ್ಲಂ ವೀರಭದ್ರಪ್ಪ, ಕೆ.ಸಿ. ಕೊಂಡಯ್ಯ, ಬಿ. ನಾಗೇಂದ್ರ ಸೇರಿದಂತೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ, ಜಿಲ್ಲಾ ಪಂಚಾಯಿತಿ ಸಿಇಓ ಕೆ. ನಿತೀಶ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.