ಕರ್ನಾಟಕ

karnataka

ETV Bharat / state

ಹೋಂ ಐಸೋಲೇಷನ್​ನಲ್ಲಿರುವ ಸೋಂಕಿತರಿಂದಲೇ ಕೋವಿಡ್ ಹೆಚ್ಚಳ: ಸಚಿವ ಆನಂದ್ ಸಿಂಗ್

ಹೋಂ ಐಸೊಲೇಷನ್​ನಲ್ಲಿರುವ ಸೋಂಕಿತರ ಬಗ್ಗೆ ನಮ್ಮ ಆಶಾ ಕಾರ್ಯಕರ್ತೆಯರು ತೀವ್ರ ನಿಗಾ ವಹಿಸಬೇಕು. ಇದು ಸೋಂಕು ‌ನಿಯಂತ್ರಣಕ್ಕೆ ಸಹಕಾರಿಯಾಗಲಿದೆ ಎಂದು ಆನಂದ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

Anand Singh
ಆನಂದ್ ಸಿಂಗ್

By

Published : Apr 19, 2021, 4:47 PM IST

ಬಳ್ಳಾರಿ: ಹೋಂ ಐಸೊಲೇಷನ್​ನಲ್ಲಿರುವ ಸೋಂಕಿತರಿಂದಲೇ ಈ‌ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ ಆಗುತ್ತಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯ ವಿಮ್ಸ್ ಆಡಳಿತ ಭವನದಲ್ಲಿಂದು ನಡೆದ ಕೋವಿಡ್ ಎರಡನೇ ಅಲೆಯ ನಿಯಂತ್ರಣದ ಕುರಿತ ಪೂರ್ವಭಾವಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೋಂ ಐಸೊಲೇಷನ್​ನಲ್ಲಿರುವ ಸೋಂಕಿತರ ಬಗ್ಗೆ ನಮ್ಮ ಆಶಾ ಕಾರ್ಯಕರ್ತೆಯರು ತೀವ್ರ ನಿಗಾ ವಹಿಸಬೇಕು. ಇದರಿಂದ ಕೋವಿಡ್ ಸೋಂಕು ‌ನಿಯಂತ್ರಣಕ್ಕೆ ಸಹಕಾರಿಯಾಗಲಿದೆ ಎಂದರು.

ರಾಜ್ಯದಲ್ಲಿ ಕಳೆದ ವರ್ಷ ಕೊರೊನಾ ನಿಯಂತ್ರಣಕ್ಕೆ ಸಮಸ್ಯೆ ಎದುರಾಗಿತ್ತು. ಈ ವರ್ಷ ಎರಡನೇ ಅಲೆ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ 1800 ಸಕ್ರಿಯ ಪ್ರಕರಣಗಳಿವೆ. ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ 10 ಕೇಸ್ ಗಳಿದ್ದವು ಎಂದು ತಿಳಿಸಿದರು.

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 1128 ಆಕ್ಸಿಜನ್ ಬೆಡ್​ಗಳಿವೆ. ಈಗ 115 ಜನರು ಆಕ್ಸಿಜನ್ ಬೆಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿಯುನಲ್ಲಿ 28 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಭಯ ಜಿಲ್ಲೆಗಳಲ್ಲಿ 116 ವೆಂಟಿಲೇಟರ್​ಗಳ ವ್ಯವಸ್ಥೆ ಇದೆ. ಇವತ್ತಿನಿಂದ ಏಪ್ರಿಲ್‌ 30 ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಉಭಯ ಜಿಲ್ಲೆಗಳಲ್ಲಿ ಯಾವುದೇ ಆಕ್ಸಿಜನ್ ಕೊರತೆ ಇಲ್ಲ. ಉಭಯ ಜಿಲ್ಲೆಗಳಲ್ಲಿ ಇದುವರೆಗೆ 2.65 ಲಕ್ಷ ಮಂದಿಗೆ ವ್ಯಾಕ್ಸಿನ್ ಹಾಕಲಾಗಿದೆ. ನಿತ್ಯ 10 ಸಾವಿರ ಮಂದಿಗೆ ವ್ಯಾಕ್ಸಿನ್ ಕೊಡಲಾಗುತ್ತಿದೆ ಎಂದರು.

ಕೈಗಾರಿಕಾ ಪ್ರದೇಶಗಳ ಮೇಲೆ ನಿಗಾವಹಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಕೈಗಾರಿಕಾ ಕಂಪನಿಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಡಿಸಿಗೆ ಸೂಚನೆ ನೀಡಿರುವೆ ಎಂದರು.

ABOUT THE AUTHOR

...view details