ಹೊಸಪೇಟೆ: ಹಂಪಿಯ ಉತ್ಸವ ಕುರಿತು ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅರಣ್ಯ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ತಿಳಿಸಿದರು.
ಸರಳವಾಗಿ ಹಂಪಿ ಉತ್ಸವ ಆಚರಣೆ: ಸಚಿವ ಆನಂದ್ ಸಿಂಗ್ - ಹಂಪಿ
ಹಂಪಿ ಉತ್ಸವ ಕುರಿತು ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ತಿಳಿಸಿದ್ದಾರೆ.
ನಗರದಲ್ಲಿ ಈಟಿವಿ ಭಾರತ್ ನೊಂದಿಗೆ ಮಾತನಾಡಿದ ಅವರು, ತುಂಗಾರತಿ ಹಾಗೂ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ಒಂದು ಕಡೆ ಚರ್ಚೆಯಾಗಿದೆ. ಅದನ್ನು ಜಿಲ್ಲಾಧಿಕಾರಿಯೊಂದಿಗೆ ಚರ್ಚೆ ಮಾಡಲಾಗುವುದು. ಅದ್ಧೂರಿಯಾಗಿ ಮಾಡುವುದಿಲ್ಲ. ಸರಳವಾಗಿ ಆಚರಿಸಲಾಗುವುದು ಎಂದರು.
ಕೊರೊನಾ ಸಂದರ್ಭದಲ್ಲಿ ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಮಾಡಲು ಬರುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತು. ಕೆಲವರು ಮೈಸೂರು ದಸರಾ ಉತ್ಸವವನ್ನು ಮಾಡಲಾಗುತ್ತಿದೆ. ಹಂಪಿ ಉತ್ಸವವನ್ನು ಏಕೆ ಅದ್ಧೂರಿಯಾಗಿ ಮಾಡುತ್ತಿಲ್ಲ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸ್ಪರ್ಧೆಗೆ ಇಳಿಯಬಾರದು ಎಂದು ಹೇಳಿದರು.