ಕರ್ನಾಟಕ

karnataka

ETV Bharat / state

ಶ್ರೀರಾಮುಲುಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ವಹಿಸಲು ಸಿಎಂಗೆ ಮನವಿ ಮಾಡುವೆ: ಸಚಿವ ಆನಂದ ಸಿಂಗ್ - ಸಚಿವ ಆನಂದಸಿಂಗ್ ಹೇಳಿಕೆ

ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಬಳ್ಳಾರಿ ನಗರ ಹೆಚ್ಚು ಅಭಿವೃದ್ಧಿಯಾಗಲಿದೆ‌.‌ ರಾಜ್ಯಮಟ್ಟದ ನಾಯಕರಾದ ಅವರಿಗೆ ಮುಂದೆ ಉತ್ತಮ ಸ್ಥಾನಗಳು ಸಿಗಲಿವೆ ಎಂದು ಸಚಿವ ಆನಂದಸಿಂಗ್ ಅಭಿಪ್ರಾಯಪಟ್ಟರು.

minister anand singh
ಸಚಿವ ಆನಂದಸಿಂಗ್

By

Published : Apr 21, 2021, 2:19 PM IST

Updated : Apr 21, 2021, 3:04 PM IST

ಬಳ್ಳಾರಿ:ಸಮಾಜ‌ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರಿಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಅವರು ಸ್ವತಃ ಸಿಎಂ ಬಳಿ ಮನವಿ‌ ಮಾಡುವುದಾಗಿ ಹೇಳಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿಗಳ‌ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಆನಂದಸಿಂಗ್, ಈ ಚುನಾವಣೆ ಮುಗಿದ ಬಳಿಕ ಸಿಎಂಗೆ ಮನವಿ ಮಾಡುವೆ. ಸಚಿವ ಶ್ರೀರಾಮುಲು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದಿದ್ದಾರೆ.

ಸಚಿವ ಶ್ರೀರಾಮುಲು ಉಸ್ತುವಾರಿ ಸಚಿವರಾಗುವುದರಿಂದ ಬಳ್ಳಾರಿ ನಗರದ ಸರ್ವಾಂಗೀಣ ಅಭಿವೃದ್ಧಿಯಾಗಲಿದೆ. ನಾನೇ ಸಿಎಂ ಬಳಿ ಮನವಿ ಮಾಡುವೆ. ಸಚಿವ ಶ್ರೀರಾಮುಲು ಅವರಿಗೆ ಉಸ್ತುವಾರಿ ಜವಾಬ್ದಾರಿ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಓದಿ:ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ... ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದ ಸಚಿವ ಸಿಂಗ್

Last Updated : Apr 21, 2021, 3:04 PM IST

ABOUT THE AUTHOR

...view details