ಬಳ್ಳಾರಿ :ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್‌ನಲ್ಲಿ ಸಿಂಹ ಮತ್ತು ಹುಲಿ ಸಫಾರಿಯನ್ನು ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಲೋಕಾರ್ಪಣೆಗೊಳಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಂದಾಜು 65 ಕೋಟಿ ರೂಗಳ ಅನುದಾನವನ್ನು ಈ ಸಫಾರಿಗೆ ವ್ಯಯ ಮಾಡಲಾಗಿದ್ದು, ಮೈತ್ರಿ ಸರ್ಕಾರದಲ್ಲಿ ಇದೊಂದು ಹೆಮ್ಮೆಯ ವಿಚಾರವಾಗಿದೆ. ಈ ಮೂಲಕ ಮೈಸೂರು ಜೂಲಾಜಿಕಲ್ ಪಾರ್ಕ್ ನಂತರ ನಗರದಲ್ಲಿ ಇಷ್ಟೊಂದು ದೊಡ್ಡಮಟ್ಟದ ಪಾರ್ಕ್ ಶುರುವಾದಂತಾಗಿದೆ. ಸದ್ಯ ಮೈಸೂರು ಮತ್ತು ಬನ್ನೇರುಘಟ್ಟ ಮೃಗಾಲಯಗಳಿಂದ ಕ್ರಮವಾಗಿ ನಾಲ್ಕು ಹುಲಿ, ಸಿಂಹಗಳನ್ನು ಸ್ಥಳಾಂತರಿಸಲಾಗಿದೆ. ಹುಲಿಗಳ ಸಫಾರಿಯನ್ನು 21.02 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿದ್ದು,ಅಂದಾಜು 19.33 ಹೆಕ್ಟೇರ್ ಪ್ರದೇಶದಲ್ಲಿ ಸಿಂಹಗಳ ಸಫಾರಿಯನ್ನು ನಿರ್ಮಿಸಲಾಗಿದೆ ಎಂದರು.