ಕರ್ನಾಟಕ

karnataka

ETV Bharat / state

ಬಿಜೆಪಿ ಸೇರಲು ಕಾಂಗ್ರೆಸ್​ ನಾಯಕರ ದುಂಬಾಲು: ಸಚಿವ ಶ್ರೀರಾಮುಲು ಬಾಂಬ್​ - ಕಾಂಗ್ರೆಸ್​ ನಾಯಕರ ಬಗ್ಗೆ ಸಚಿವ ಶ್ರೀರಾಮುಲು

ಕಲ್ಯಾಣ ಕರ್ನಾಟಕ ಭಾಗದ ಹಾಲಿ ಶಾಸಕರು, ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ. ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು ಸಚಿವ ಶ್ರೀರಾಮುಲು ಮತ್ತೆ ಆಪರೇಷನ್​ ಕಮಲದ ಬಗ್ಗೆ ಮಾತನಾಡಿದ್ದಾರೆ.

minister-shriramulu
ಸಚಿವ ಶ್ರೀರಾಮುಲು ಬಾಂಬ್​

By

Published : May 10, 2022, 9:22 PM IST

ಬಳ್ಳಾರಿ:ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬರಲು ಅನೇಕರು ನನ್ನನ್ನು ಸಂಪರ್ಕಿಸಿದ್ದಾರೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಅನೇಕ ರಾಜಕೀಯ ನಾಯಕರು, ಹಾಲಿ ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಮಧ್ಯವರ್ತಿಗಳನ್ನು ಕಳಿಸಿ ಪಾರ್ಟಿ ಸೇರಲು ಅವಕಾಶ ಕೇಳುತ್ತಿದ್ದಾರೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಬಿಜೆಪಿ ಆಪರೇಷನ್ ಕಮಲದ ಬಗ್ಗೆ ಸುಳಿವು ನೀಡಿದ್ದಾರೆ.

ಬಳ್ಳಾರಿಯಲ್ಲಿ ಶಿವರಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯುತ್ಸವದ ಮೆರವಣಿಗೆಗೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಯ ಮಿಷನ್ 150 ಗುರಿ ತಲುಪಲು ಕಲ್ಯಾಣ ಕರ್ನಾಟಕದಿಂದ ಅತಿ ಹೆಚ್ಚು ಶಾಸಕರನ್ನು ಗೆಲ್ಲಿಸಿ ಕೊಡಲಾಗುವುದು. ಕಾಂಗ್ರೆಸ್​ ಬಿಟ್ಟು ಬಿಜೆಪಿ ಸೇರಲು ನನ್ನ ಸಂಪರ್ಕದಲ್ಲೂ ಅನೇಕರಿದ್ದಾರೆ. ಸಮಯ ಬಂದಾಗ ಹೆಸರು ಬಯಲು ಮಾಡುವೆ ಎಂದರು.

ಈಗಾಗಲೇ ಈ ವಿಚಾರವನ್ನು ಸಿಎಂ ಸೇರಿದಂತೆ ವರಿಷ್ಠರ ಗಮನಕ್ಕೆ ತಂದಿರುವೆ. ಹೈಕಮಾಂಡ್​ ಗ್ರೀನ್​ ಸಿಗ್ನಲ್ ಕೊಟ್ಟ ಬಳಿಕ ಎಲ್ಲರನ್ನೂ ಬಿಜೆಪಿಗೆ ಕರೆತರುವೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ 2023 ರ ಚುನಾವಣೆಗೆ ಹೋಗಲಾಗುವುದು. ಸಚಿವ ಸಂಪುಟ ಪುನಾರಚನೆಯೋ, ವಿಸ್ತರಣೆಯೋ ಆ ಬಗ್ಗೆ ಮಾಹಿತಿ ಇಲ್ಲ‌ ಎಂದರು.

ಸಂಸದೆ ಸುಮಲತಾ ಬಿಜೆಪಿ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬರೋದ್ರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬರಲಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಅನೇಕ ಅಕ್ರಮಗಳು ನಡೆದಿದ್ದರೂ ಯಾವುದೇ ತನಿಖೆ ಮಾಡಿರಲಿಲ್ಲ. ಕೆಲ ಸಚಿವರ ವಿರುದ್ಧ ವಿನಾಕಾರಣ ಆರೋಪ ಮಾಡಲಾಗುತ್ತಿದೆ ಎಂದು ಶ್ರೀರಾಮುಲು ಕಿಡಿಕಾರಿದ್ದಾರೆ.

ಓದಿ:ಸ್ಥಳೀಯ ಸಂಸ್ಥೆ ಚುನಾವಣೆ ಕುರಿತು ರಾಜ್ಯ ಚುನಾವಣಾ ಆಯೋಗದ ನಿರ್ಧಾರಕ್ಕೆ ಬದ್ದ: ಸಿಎಂ ಬೊಮ್ಮಾಯಿ

For All Latest Updates

TAGGED:

ABOUT THE AUTHOR

...view details