ಬಳ್ಳಾರಿ:ರಾಜ್ಯದ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಸದ್ಯದಲ್ಲೇ ಮೀಸಲಾತಿ ಪ್ರಮಾಣ ಹೆಚ್ಚಳದ ಬಗ್ಗೆ ಸಿಹಿ ಸುದ್ದಿ ನೀಡುತ್ತೇವೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಜಿಲ್ಲೆಯ ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ಬಳಿ ಏತ ನೀರಾವರಿ ಯೋಜನೆಯ ಕಾಮಗಾರಿ ಉದ್ಘಾಟಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ಎಸ್ಸಿ ಸಮುದಾಯಕ್ಕೆ ಶೇ.15 ಇರುವ ಮೀಸಲಾತಿ ಪ್ರಮಾಣವನ್ನು ಶೇ.17ಕ್ಕೆ ಹಾಗು ಎಸ್ಟಿಗಳಿಗೆ ಶೇ.3ರ ಇರುವ ಮೀಸಲಾತಿಯ ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಮೀಸಲಾತಿ ವಿಚಾರದಲ್ಲಿ ನನ್ನ ಮಾತಿಗೆ ನಾನು ಬದ್ಧವಾಗಿದ್ದೇನೆ ಎಂದು ಹೇಳಿದರು.