ಬಳ್ಳಾರಿ: ಶನಿವಾರ ಮುನಿಸಿಪಲ್ ಕಾಲೇಜಿನ ಮೈದಾನದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆಯ ಬಹಿರಂಗ ಸಮಾವೇಶ ನಡೆದಿತ್ತು. ಸಮಾವೇಶದ ನಂತರ ಮೈದಾನದಲ್ಲಿ ಕಸದ ರಾಶಿ ಬಿದ್ದಿತ್ತು. ಅದನ್ನು ಭಾನುವಾರ ಮಧ್ಯಾಹ್ನ ಸಚಿವ ಶ್ರೀರಾಮುಲು, ಬಳ್ಳಾರಿ ನಗರ ಶಾಸಕ ಸೋಮಶೇಖರರೆಡ್ಡಿ, ಮಾಜಿ ಸಂಸದೆ ಜೆ.ಶಾಂತಾ ಸೇರಿದಂತೆ ಹಲವು ನಾಯಕರು ಸ್ವಚ್ಛಗೊಳಿಸಿದರು.
ಬೆಳಗ್ಗೆ ಮೈದಾನಕ್ಕೆ ಬಂದಿದ್ದ ಜನ ಅಲ್ಲಿನ ಅಸ್ವಚ್ಛತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಸಂಜೆಯಾದರೂ ಕಾಂಗ್ರೆಸ್ ಮೈದಾನವನ್ನು ಸ್ವಚ್ಛ ಮಾಡದಿದ್ದಾಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು, ನಗರ ಶಾಸಕ ಸೋಮಶೇಖರ್ ರೆಡ್ಡಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಗೋನಾಳ್ ಮುರಹರಗೌಡ ಮೊದಲಾದವರು ಟ್ರ್ಯಾಕ್ಟರ್ ತರಿಸಿ ಮೈದಾನದಲ್ಲಿದ್ದ ಪ್ಲಾಸ್ಟಿಕ್ ಕವರ್ ಸೇರಿದಂತೆ ಕಸವನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿದರು.
ಇದನ್ನೂ ಓದಿ:ಬಿಜೆಪಿ ಮತ್ತು ಆರ್ಎಸ್ಎಸ್ ವಿಚಾರಧಾರೆ ದೇಶ ವಿಭಜನೆ ಮಾಡುತ್ತಿದೆ: ರಾಹುಲ್ ಗಾಂಧಿ