ವಿಜಯನಗರ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಸುವುದಾಗಿ ನಂಬಿಸಿ ಯುವಕನೊಬ್ಬ ಬಲತ್ಕಾರ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನ ವಿರುದ್ಧ ಕೊಟ್ಟೂರು ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನ ಮಲ್ಲನಾಯ್ಕನಹಳ್ಳಿ ಗ್ರಾಮದ ಬೋಡಿ ರಮೇಶ್ ಆರೋಪಿತ ವ್ಯಕ್ತಿಯಾಗಿದ್ದಾನೆ. ಕಳೆದ ಏಪ್ರೀಲ್ 21 ರಂದು ಬಾಲಕಿ ತನ್ನ ಚಿಕ್ಕಮ್ಮಳ ಗ್ರಾಮಕ್ಕೆ ಮದುವೆಗೆಂದು ಬಂದಾಗ ಆರೋಪಿಯು,
ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಬಲವಂತವಾಗಿ ಅತ್ಯಾಚಾರವೆಸಗಿದ್ದ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಾಳೆ.