ಬಳ್ಳಾರಿ: ಇದೇನ್ ರಾಜಕೀಯನೋ ನನಗಂತೂ ಒಂದೂ ಅರ್ಥವಾಗುತ್ತಿಲ್ಲ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಬೇಸರ ವ್ಯಕ್ತಪಡಿಸಿದರು.
ಏನ್ ರಾಜಕೀಯನೋ ನನಗಂತೂ ಒಂದೂ ಅರ್ಥವಾಗುತ್ತಿಲ್ಲ: ಗಾಲಿ ಸೋಮಶೇಖರ ರೆಡ್ಡಿ - Bellary
ಸದ್ಯ ರಾಜ್ಯ ರಾಜಕೀಯದ ಬೆಳವಣಿಗೆ ಕುರಿತು ಏನೂ ಹೇಳಲು ಆಗುತ್ತಿಲ್ಲ ಎಂದು ಶಾಸಕ ಗಾಲಿ ಸೋಮಶೇಖರ ರೆಡ್ಡಿ ಹೇಳಿದರು.
![ಏನ್ ರಾಜಕೀಯನೋ ನನಗಂತೂ ಒಂದೂ ಅರ್ಥವಾಗುತ್ತಿಲ್ಲ: ಗಾಲಿ ಸೋಮಶೇಖರ ರೆಡ್ಡಿ MLA G Somashekara reddy](https://etvbharatimages.akamaized.net/etvbharat/prod-images/768-512-12538826-thumbnail-3x2-net.jpg)
ಶಾಸಕ ಗಾಲಿ ಸೋಮಶೇಖರ ರೆಡ್ಡಿ
ಶಾಸಕ ಗಾಲಿ ಸೋಮಶೇಖರ ರೆಡ್ಡಿ
ಬಳ್ಳಾರಿಯ ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ರಾಜಕೀಯ ಬೆಳವಣಿಗೆ ಏನಾಗುತ್ತದೆ ಎಂದು ಕಾದು ನೋಡಬೇಕಷ್ಟೆ ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರೆದಿರುವುದಕ್ಕೆ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ದೆಹಲಿಗೆ ಹೋಗಿದ್ದರು ಅಂತ ಅನ್ನಿಸುತ್ತಿದೆ. ಇದಲ್ಲದೇ ಸಚಿವ ಬಿ. ಶ್ರೀರಾಮುಲು ಡಿಸಿಎಂ ಹುದ್ದೆ ಆಕಾಂಕ್ಷಿಯಾಗಿದ್ದಾರೆ. ಅವರು ದೆಹಲಿಗೆ ಹೋಗಿದ್ದರ ಬಗ್ಗೆ ನನಗೆ ಪೂರ್ಣ ಮಾಹಿತಿ ಇಲ್ಲ ಎಂದರು.