ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಅವರ ಪುತ್ರ ಪಿ.ಟಿ.ಭರತ್ ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ತಾಂಡಾದಿಂದ ಸ್ಪರ್ಧಿಸಿದ್ದ ಪಿ.ಟಿ.ಭರತ್ ತಮ್ಮ ಎದುರಾಳಿಯಾಗಿದ್ದ ಚಿಕ್ಕಪ್ಪ ಪಿ.ಟಿ.ಶಿವಾಜಿ ಅವರನ್ನು ಸೋಲಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.