ಬಳ್ಳಾರಿ:ವಿಮಾನ ನಿಲ್ದಾಣ ನಿರ್ಮಾಣ ಹಾಗೂ ನಗರದ ಹೊರವಲಯದಲ್ಲಿ ವರ್ತುಲ ರಸ್ತೆ ಕಾಮಗಾರಿ ಕುರಿತು ರಾಜ್ಯ ಮೂಲ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಅವರೊಂದಿಗೆ ಶಾಸಕ ಸೋಮಶೇಖರ್ ರೆಡ್ಡಿ ಅವರು ಚರ್ಚಿಸಿದರು.
ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ: ಕಪಿಲ್ ಮೋಹನ್ ಜತೆ ಶಾಸಕ ಸೋಮಶೇಖರ್ ರೆಡ್ಡಿ ಚರ್ಚೆ - kapil Mohan
ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ, ರಿಂಗ್ ರೋಡ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶಾಸಕ ಸೋಮಶೇಖರ್ ರೆಡ್ಡಿ ಅವರು ರಾಜ್ಯ ಮೂಲಸೌಲಭ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಜತೆ ಚರ್ಚಿಸಿದರು.

Meeting
ವಿಮಾನ ನಿಲ್ದಾಣ ನಿರ್ಮಾಣ, ರಿಂಗ್ ರೋಡ್ಗೆ ಸಂಬಂಧಿಸಿದಂತೆ ಶಾಸಕರು ನೀಡಲಾದ ವಿವರ ವರದಿಯನ್ನು ಪರಿಶೀಲಿಸಿದ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಈ ಯೋಜನೆಗಳ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ಹಾಗೂ ರಾಯಚೂರು ಬಳ್ಳಾರಿ ಮತ್ತು ಕೊಪ್ಪಳ ಹಾಲು ಒಕ್ಕೂಟದ ನಿರ್ದೇಶಕ ವೀರಶೇಖರ್ ರೆಡ್ಡಿ ಉಪಸ್ಥಿತರಿದ್ದರು.