ಬಳ್ಳಾರಿ:ನಗರದ ಗಂಗೋತ್ರಿ ವಸತಿ ನಿಲಯದಲ್ಲಿ ಬೆಳಗಿನ ಉಪಹಾರ ಸೇವಿಸಿದ್ದರ ಪರಿಣಾಮ ತೀವ್ರ ಅಸ್ವಸ್ಥರಾಗಿ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಗಳ ಆರೋಗ್ಯವನ್ನು ಶಾಸಕ ಜಿ. ಸೋಮಶೇಖರ ರೆಡ್ಡಿ ವಿಚಾರಿಸಿದರು.
ವಿಮ್ಸ್ ಆಸ್ಪತ್ರೆಗೆ ಶಾಸಕ ರೆಡ್ಡಿ ಭೇಟಿ: ಅಸ್ವಸ್ಥರಾಗಿದ್ದ ವಿದ್ಯಾರ್ಥಿಗಳ ಆರೋಗ್ಯ ವಿಚಾರಣೆ - ಅಸ್ವಸ್ಥ
ಬೆಳಗಿನ ಉಪಹಾರಕ್ಕೆ ಅವಲಕ್ಕಿ ಸೇವಿಸಿದ್ದ ಸುಮಾರು 37 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಅವರನ್ನು ಸಂಜೆಯೊತ್ತಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬೆಳಗಿನ ಉಪಹಾರ ಅವಲಕ್ಕಿ ಸೇವಿಸಿದ್ದರಿಂದ ಸರಿಸುಮಾರು 37 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಅವರನ್ನು ಸಂಜೆಯೊತ್ತಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿದ ಶಾಸಕ ರೆಡ್ಡಿಯವರು, ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿದ್ದಲ್ಲದೇ, ವಿದ್ಯಾರ್ಥಿಗಳ ಆರೈಕೆ ಕುರಿತು ಪರಿಶೀಲಿಸಿದರು.
ಬಳಿಕ ಮಾತನಾಡಿದ ಅವರು, ಶೀಘ್ರವೇ ರಕ್ತದ ಮಾದರಿಯನ್ನು ಪರೀಕ್ಷಿಸಬೇಕು. ಆಸ್ಪತ್ರೆಯಲ್ಲಿ ರಕ್ತದ ಮಾದರಿ ತಪಾಸಣೆ ಲಭ್ಯವಿಲ್ಲದಿದ್ದರೆ ಖಾಸಗಿ ಲ್ಯಾಬೋರೇಟರಿಗೆ ಕೊಂಡೊಯ್ದು ಪರೀಕ್ಷೆ ನಡೆಸಬೇಕೆಂದು ವೈದ್ಯರಿಗೆ ಸಲಹೆ ನೀಡಿದ್ದಾರೆ. ವಿಪರೀತ ಜ್ವರದಿಂದ ಬಳಲುತ್ತಿರುವವರಿಗೆ ಅಗತ್ಯ ಚಿಕಿತ್ಸೆ ಕೊಡಿಸಬೇಕೆಂದು ಸೂಚನೆ ನೀಡಿದ್ದಾರೆ.