ಬಳ್ಳಾರಿ: ಟಿಪ್ಪು ಜಯಂತಿಯ ಬಗ್ಗೆ ಸಿ.ಎಂ.ಇಬ್ರಾಹಿಂಗೆ ಈಗ ಜ್ಞಾನೋದಯವಾಗಿದೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ವ್ಯಂಗ್ಯವಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜಿ.ಸೋಮಶೇಖರ್ ರೆಡ್ಡಿ ಮುಸ್ಲಿಂರಲ್ಲಿ ಜಯಂತಿ ಸಂಪ್ರದಾಯವಿಲ್ಲ. ನಮ್ಮ ಸಂಪ್ರದಾಯದಲ್ಲಿ ಮೂರ್ತಿ ಪೂಜೆಯೂ ಇಲ್ಲ. ಈ ಹಿಂದೆ ಸರ್ಕಾರ ಟಿಪ್ಪು ಜಯಂತಿ ಮಾಡಿದ ರೀತಿಯೇ ತಪ್ಪು. ಮುಸ್ಲಿಂರಲ್ಲಿ ಈ ಸಂಪ್ರದಾಯವೇ ಇಲ್ಲ ಎಂಬ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿದ ಸೋಮಶೇಖರ್, ಇಬ್ರಾಹಿಂಗೆ ಈಗ ಜ್ಞಾನೋದಯವಾಗಿದೆ. ಈಗ ತಮ್ಮ ತಪ್ಪನ್ನು ತಿದ್ದುಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಹಂಪಿ ಉತ್ಸವ ಮೂರು ದಿನ ಮಾಡುತ್ತೇವೆ:ಜಿಲ್ಲಾ ಉಸ್ತುವಾರಿ ಸಚಿವರಿಗೆ ಒತ್ತಡ ತಂದಾದರೂ ಸರಿ ಹಂಪಿ ಉತ್ಸವವನ್ನು ಮೂರು ದಿನಗಳ ಕಾಲ ಮಾಡುತ್ತೇವೆ ಎಂದು ಜಿ.ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.
ಸರ್ಕಾರದಲ್ಲಿ ಹಣವಿಲ್ಲ ಎಂದು ಕನ್ನಡ ವಿಶ್ವವಿದ್ಯಾಲಯ ಹಂಪಿಯ ಸಂಶೋಧನಾ ವಿದ್ಯಾರ್ಥಿಳು ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬುದಕ್ಕೆ ಪ್ರಕ್ರಿಯೆ ನೀಡಿದ ಶಾಸಕ ಜಿ.ಸೋಮಶೇಖರ್ ರೆಡ್ಡಿ, ಸರ್ಕಾರದಲ್ಲಿ 36 ಸಾವಿರ ಕೋಟಿ ಇದೆ. ಅದರಲ್ಲಿ ಶೇ. 24ರಷ್ಟು ಹಣ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಮೀಸಲಿದೆ. ಇದಕ್ಕೆ ಸಂಬಂಧಿಸಿದಂತೆ ಗೋವಿಂದ ಕಾರಜೋಳ ಅವರೊಂರಿಗೆ ಮಾತನಾಡುತ್ತೇನೆ ಎಂದರು.