ಕರ್ನಾಟಕ

karnataka

ETV Bharat / state

ಎಪಿಎಂಸಿ ಮಾರುಕಟ್ಟೆ ಶಾಸಕ ಸೋಮಶೇಖರ ರೆಡ್ಡಿ ದಿಢೀರ್ ಭೇಟಿ - Gali somashekhar reddy

ಎಪಿಎಂಸಿ ಮಾರುಕಟ್ಟೆ ಅವ್ಯವಸ್ಥೆಯ ಕುರಿತು ದೂರುಗಳು ಬಂದ ಹಿನ್ನಲೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಸುಮಾರಿಗೆ ದಿಢೀರ್‌ ಭೇಟಿ ನೀಡಿದ ಎಪಿಎಂಸಿ ಕಾರ್ಯದರ್ಶಿ ಹಾಗೂ ಸಿಬ್ಬಂದಿಗೆ ಬಿಸಿ ಮುಟ್ಟಿಸಿದರು.

MLA Somashekhar reddy visits APMC market
ಎಪಿಎಂಸಿ ಮಾರುಕಟ್ಟೆ ಶಾಸಕ ಸೋಮಶೇಖರ ರೆಡ್ಡಿ ದಿಢೀರ್ ದಾಂಗುಡಿ....

By

Published : Mar 27, 2020, 1:51 PM IST

ಬಳ್ಳಾರಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಇಲ್ಲಿನ ಎಪಿಎಂಸಿ ಮಾರುಕಟ್ಟೆಗೆ ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಪಿಎಂಸಿ ಮಾರುಕಟ್ಟೆ ಅವ್ಯವಸ್ಥೆಯ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಸುಮಾರಿಗೆ ದಿಢೀರನೆ ಭೇಟಿ ನೀಡಿ ಎಪಿಎಂಸಿ ಕಾರ್ಯದರ್ಶಿ ಹಾಗೂ ಸಿಬ್ಬಂದಿಗೆ ಅಚ್ಚರಿ ಮೂಡಿಸಿದರಲ್ಲದೇ ವಾರದ ಸಂತೆ ಮಾರುಕಟ್ಟೆಯಂತೆ ಭಾಸವಾಗುತ್ತಿದ್ದ ವಾತಾವರಣ ಕಂಡು ಕಾರ್ಯದರ್ಶಿ ಕೆ.ಮೋಹನ್​ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೇ, ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟಗಾರರ ಹಾಗೂ ಸಾರ್ವಜನಿಕರ ವಿರುದ್ಧವೂ ಅವರು ಹರಿಹಾಯ್ದರು.

ತರಕಾರಿ ಖರೀದಿಸಲು ಮುಗಿಬಿದ್ದವರಿಗೆ ಸಾಮಾಜಿಕ ಅಂತರ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.

ಮಾಸ್ಕ್ ವಿತರಣೆ: ಇದೇ ವೇಳೆ ಎಪಿಎಂಸಿ ಮಾರುಕಟ್ಟೆಯಲ್ಲಿರುವ ಸಾರ್ವಜನಿಕರು ಹಾಗೂ ತರಕಾರಿ ಮಾರಾಟಗಾರರಿಗೆ ಮಾಸ್ಕ್ ವಿತರಿಸಿದರು. ಮಾಸ್ಕ್​ಗಾಗಿ ಮುಗಿಬಿದ್ದವರನ್ನು ಪೊಲೀಸರು ಲಾಠಿ ಹಿಡಿದು ಚದುರಿಸಿದರು.

ಬಳಿಕ ಮಾತನಾಡಿದ ಶಾಸಕ ಸೋಮಶೇಖರ ರೆಡ್ಡಿ, ಎಪಿಎಂಸಿ ಮಾರುಕಟ್ಟೆಯಲ್ಲಿ ಸಂಪೂರ್ಣ ಅವ್ಯವಸ್ಥೆ ಕಂಡುಬರುತ್ತಿದೆ.‌ ಇಲ್ಲಿ ಜನರು ಸಾಮಾಜಿಕ ಅಂತರ ಕೂಡ ಕಾಯ್ದುಕೊಳ್ಳುತ್ತಿಲ್ಲ. ಹೀಗಾಗಿ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಬಳಿ ಈ‌ ದಿನವೇ ಅವ್ಯವಸ್ಥೆ ಸರಿಪಡಿಸುವಂತೆ ಮಾತನಾಡುವೆ ಎಂದು ತಿಳಿಸುವೆ ಎಂದು ಹೇಳಿದ್ದಾರೆ.

ABOUT THE AUTHOR

...view details