ಬಳ್ಳಾರಿ :ಜಿಲ್ಲಾಸ್ಪತ್ರೆಯಲ್ಲಿನ 100 ಹಾಸಿಗೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಯ ವಸತಿ ಗೃಹಗಳ ಕಟ್ಟಡಗಳ ಕಾಮಗಾರಿಗೆ ಶಾಸಕ ಜಿ.ಸೋಮಶೇಖರ್ ರೆಡ್ಡಿ ಭೂಮಿ ಪೂಜೆ ನೆರವೇರಿಸಿದರು.
₹20 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗೆ ಶಾಸಕ ಜಿ ಸೋಮಶೇಖರ ರೆಡ್ಡಿ ಚಾಲನೆ - Bellary latest news
ಈ ಅನುದಾನದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು ವಿಭಾಗ ವೈದ್ಯರ ವಸತಿಗೃಹಗಳು, ಶುಶ್ರೂಕಿಯರ ವಸತಿಗೃಹಗಳು, ಗ್ರೂಪ್‌ಡಿ ವಸತಿ ಗೃಹಗಳ ಕಟ್ಟಡ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ..
ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್ಹೆಚ್ಎಂ) ಅಡಿಯಲ್ಲಿ ಇಪ್ಪತ್ತು ಕೋಟಿಗೂ ಅಧಿಕ ಅನುದಾನ ಬಿಡುಗಡೆಯಾಗಿದೆ. ಈ ಅನುದಾನದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು ವಿಭಾಗ ವೈದ್ಯರ ವಸತಿಗೃಹಗಳು, ಶುಶ್ರೂಕಿಯರ ವಸತಿಗೃಹಗಳು, ಗ್ರೂಪ್‌ಡಿ ವಸತಿ ಗೃಹಗಳ ಕಟ್ಟಡ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇದಕ್ಕೆ ನಗರದ ಶಾಸಕ ಜಿ ಸೋಮಶೇಖರ ರೆಡ್ಡಿ ಅವರು ಭೂಮಿ ಪೂಜೆ ಮಾಡಿದರು.
ಈ ವೇಳೆ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಜರ್ನಾರ್ದನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸರೆಡ್ಡಿ, ಶುಶ್ರೂಕಿ ಅಧೀಕ್ಷಕಿ ಶಾಂತಬಾಯಿ ಮತ್ತು ಬಳ್ಳಾರಿ ರಾಯಚೂರು ಕೊಪ್ಪಳ ಹಾಲು ಒಕ್ಕೂಟದ ನಿರ್ದೇಶಕ ಜಿ. ವೀರಶೇಖರ್ ರೆಡ್ಡಿ, ಮಹಾನಗರ ಪಾಲಿಕೆ ಸದಸ್ಯರಾದ ಮೌತ್ಕರ್ ಶ್ರೀನಿವಾಸ್ ರೆಡ್ಡಿ, ಮಲ್ಲನಗೌಡ ಹಾಗೂ ಸ್ಥಳೀಯ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.