ಬಳ್ಳಾರಿ:ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿಗಿಂದು ಶಾಸಕ ಗಾಲಿ ಸೋಮಶೇಖರರೆಡ್ಡಿ ಭೇಟಿ ನೀಡಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದರು.
ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ಶಾಸಕ ಭೇಟಿ: ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದ ಸೋಮಶೇಖರರೆಡ್ಡಿ - ಬಳ್ಳಾರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೇವಲ ಉಡುಪಿ, ಮಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ ಇನ್ನಿತರೆ ದಕ್ಷಿಣ ಕರ್ನಾಟಕ ಭಾಗದವರೇ ಮೊದಲನೆಯ ಸ್ಥಾನದಲ್ಲಿ ಬರುತ್ತಾರೆ. ನೀವು ಚೆನ್ನಾಗಿ ಓದಿದ್ದೀರಿ. ಡಿಸ್ಟಿಂಕ್ಷನ್ ಬರುತ್ತೀರಿ ಎಂಬ ಆಶಾಭಾವನೆ ನನ್ನಲ್ಲಿದೆ ಎಂದು ಶಾಸಕ ಗಾಲಿ ಸೋಮಶೇಖರರೆಡ್ಡಿ ಬಳ್ಳಾರಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
ಗಾಲಿ ಸೋಮಶೇಖರರೆಡ್ಡಿ
ಕಾಲೇಜಿನ ಆವರಣಕ್ಕೆ ಆಗಮಿಸಿದ ಶಾಸಕರನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿದ್ರು. ಬಳಿಕ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸ್ಕ್ರೀನಿಂಗ್ ಮಾಡುವ ಮುಖೇನ ಹ್ಯಾಂಡ್ ಸ್ಯಾನಿಟೈಸರ್ನ್ನು ಕಡ್ಡಾಯವಾಗಿ ಬಳಸುವಂತೆ ಜಾಗೃತಿ ಮೂಡಿಸಿದರು.