ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ಭಾವನಾತ್ಮಕವಾಗಿ ಹಾಗೂ ಸಾಂಸ್ಕೃತಿಕವಾಗಿ ಒಂದಾಗಿದೆ. ಆದರೆ, ಆಡಳಿತಾತ್ಮಕ ವಿಚಾರವಾಗಿ ಒಂದಾಗಲು ಅಸಾಧ್ಯವೆಂದು ವಿಧಾನ ಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆ ಭೌಗೋಳಿಕವಾಗಿ ಬಹು ವಿಸ್ತಾರವಾಗಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಈ ಜಿಲ್ಲೆಯ ವಿಭಜನೆ ಕುರಿತು ರಾಜ್ಯ ಸರ್ಕಾರ ಜನಪ್ರತಿನಿಧಿಗಳ ಅಭಿಪ್ರಾಯವನ್ನ ಕೇಳಿತ್ತು. ಅದಕ್ಕೆ ನಮ್ಮ ಸಮ್ಮತಿ ಇದೆ ಅಂತ ತಿಳಿಸಿದ್ದೆವು. ಅಲ್ಲದೇ, ಜಿಲ್ಲೆಯ ವಿಭಜನೆಗೆ ನಿರ್ದಿಷ್ಟ ಕಾರಣ ಹಾಗೂ ಸಲಹೆಗಳನ್ನ ನೀಡಿದ್ದೇವೆ ಎಂದು ತಿಳಿಸಿದರು.