ಬಳ್ಳಾರಿ: ಅಧಿಕಾರಕ್ಕೆ ಬರಬಹುದೆಂದು ಕಾಂಗ್ರೆಸ್ ಕನಸು ಕಾಣುತ್ತಿದೆ. ಆದರೆ ಮುಂದಿನ 20 ವರ್ಷ ನರೇಂದ್ರ ಮೋದಿಯೇ ಪ್ರಧಾನಿಯಾಗಿರುತ್ತಾರೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.
ನಗರದಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ರಾಹುಲ್ ಗಾಂಧಿ ಸೇರಿದಂತೆ ಹಲವರು ಪೋಟೋದಲ್ಲಿ ಮಾತ್ರ ನಾಯಕರು. ಮೇಡ್ ಇನ್ ಇಂಡಿಯಾ ಬೇಕು ಅಂದ್ರೆ ಮುಂದಿನ ಚುನಾವಣೆಯಲ್ಲಿ ಮೋದಿ ಆಯ್ಕೆ ಮಾಡಿ, ಮೇಡ್ ಇನ್ ಇಟಲಿ ಬೇಕು ಅಂದ್ರೆ ಸೋನಿಯಾ ಆಯ್ಕೆ ಮಾಡಿ ಎಂದರು.
ಬಳ್ಳಾರಿಯಲ್ಲಿ ನಡೆದ ಜನಾಶೀರ್ವಾದ ಕಾರ್ಯಕ್ರಮ ದೇಶದಲ್ಲಿ ಶೇ 70 ರಷ್ಟು ಲಸಿಕೆ ವಿತರಣೆ ಪೂರ್ಣಗೊಂಡಿದೆ. ವ್ಯಾಕ್ಸಿನ್ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡಿ ಜನರ ದಾರಿ ತಪ್ಪಿಸಿದೆ. ಕಾಂಗ್ರೆಸ್ನವರು ಏನೇ ಮಾಡಿದರೂ ಅಧಿಕಾರಕ್ಕೆ ಬರುವುದಿಲ್ಲ. ರಾಜ್ಯದ ಕಾಂಗ್ರೆಸ್ ನಾಯಕರು ಅಧಿಕಾರ ಹಿಡಿಯಲು ಹಗಲುಗನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.
ಕಲ್ಯಾಣ ಕರ್ನಾಟಕದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಹೆಚ್ಚು ಆಸಕ್ತಿ ತೋರಿಸುತ್ತಿದೆ. ಇದು ಮುಂಬರುವ ಚುನಾವಣೆ ಗಿಮಿಕ್ಸ್. ರಾಜ್ಯದ ಶೇ 70 ಗ್ರಾಮ ಪಂಚಾಯತಿಯಲ್ಲಿ ಬಿಜೆಪಿಯವರೇ ಸದಸ್ಯರಾಗಿದ್ದಾರೆ ಎಂದು ಅವರು ಹೇಳಿದರು.