ವಿಜಯನಗರ: ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಬೆದರಿಕೆಗೆ ಕುಟುಂಬದಿಂದ ಸಾಮೂಹಿಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್ ಸಿಂಗ್ ಹಾಗೂ ಇತರ ಮೂವರ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಿನ್ನೆ ರಾತ್ರಿ ಪ್ರಕರಣ ದಾಖಲಾಗಿದೆ.
ಡಿ. ಪೋಲಪ್ಪ ಎಂಬುವರು ಕೊಟ್ಟ ದೂರಿನ ಮೇರೆಗೆ ಐಪಿಸಿ ಸೇಕ್ಷನ್ 504, 506 r/w 34 IPC, 3(2)(Va) SC/ST ಕಾಯ್ದೆ ಅಡಿ ಆನಂದ್ ಸಿಂಗ್, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.