ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವಕ್ಕೆ ಮೈಲಾರ ಗ್ರಾಮಸ್ಥರನ್ನು ಹೊರತುಪಡಿಸಿ ಹೊರಗಿನ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಬಗ್ಗೆ ಸಭೆ ನಡೆಸಿ ಮಾತನಾಡಿರುವ ಡಿಸಿ ಮಾಲಪಾಟಿ, ಕಾರ್ಣಿಕೋತ್ಸವದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಕಾರ್ಣಿಕೋತ್ಸವಕ್ಕೆ ಫೆ.19ರಿಂದ ಮಾ.2ರವರೆಗೆ ಅಗತ್ಯ ಪೊಲೀಸ್ ಭದ್ರತಾ ವ್ಯವಸ್ಥೆ ಹಾಗೂ ಬ್ಯಾರಿಕೇಡ್ ಸೇರಿ ಇತರ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಕಾರಣಕ್ಕೂ ಜನರು ಎತ್ತಿನ ಗಾಡಿ, ಟ್ರ್ಯಾಕ್ಟರ್, ವಾಹನಗಳ ಮೂಲಕ ಮೈಲಾರ ಪ್ರವೇಶಿಸದಂತೆ ಕ್ರಮಕೈಗೊಳ್ಳಬೇಕು.