ಕರ್ನಾಟಕ

karnataka

ETV Bharat / state

ಬೊಮ್ಮಾಯಿ ಪೂರ್ಣಾವಧಿ ಪೂರೈಸುವುದಿಲ್ಲ: ಭವಿಷ್ಯ ನುಡಿದ ಮೈಲಾರಲಿಂಗೇಶ್ವರದ ಧರ್ಮಕರ್ತ - Basavaraja Bommai

ಬಸವರಾಜ ಬೊಮ್ಮಾಯಿ ಅವರು 6 ರಿಂದ 7 ತಿಂಗಳ ಕಾಲ‌ ಮಾತ್ರ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದಾರೆ. ಮುಂದಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗುವವರು ಗಡ್ಡದಾರಿಯಾಗಿರುತ್ತಾರೆ ಎಂದು ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಭವಿಷ್ಯವಾಣಿ ನುಡಿದ್ದಾರೆ.

Mylaralingeshwara temple dharma guru
ವೆಂಕಪ್ಪಯ್ಯ ಒಡೆಯರ್

By

Published : Aug 1, 2021, 1:04 PM IST

ಹೊಸಪೇಟೆ (ವಿಜಯನಗರ): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂರ್ಣಾವಧಿ ಪೂರೈಸುವುದಿಲ್ಲ ಎಂದು ಹೂವಿನಹಡಗಲಿಯ ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಭವಿಷ್ಯವಾಣಿ ನುಡಿದ್ದಾರೆ.

ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿ ಆಯ್ಕೆಗೊಂಡಿದ್ದಾರೆ. ಆದರೆ ಬೊಮ್ಮಾಯಿ ಅವರು 6 ರಿಂದ 7 ತಿಂಗಳ ಕಾಲ‌ ಮಾತ್ರ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದಾರೆ. ಇದು ಮೈಲಾರ ಭವಿಷ್ಯವಾಣಿಯಿಂದ ತಿಳಿದು ಬರುತ್ತಿದೆ ಎಂದು ಹೇಳಿದರು.

ಭವಿಷ್ಯ ನುಡಿದ ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮಕರ್ತ ವೆಂಕಪ್ಪಯ್ಯ

ಮುಂದಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗುವವರು ಗಡ್ಡದಾರಿ ಯಾಗಿರುತ್ತಾರೆ. ಅವರೇ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ. ಮೈಲಾರ ಭವಿಷ್ಯವಾಣಿಯಂತೆ ಪ್ರಸ್ತುತ ರಾಜಕಾರಣ ನಡೆಯುತ್ತಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಲಿದೆ. ಹಾಗಾಗಿ ಜನರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು.‌ ಅಲ್ಲದೇ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸಬೇಕು ಎಂದು ಹೇಳಿದರು.

ABOUT THE AUTHOR

...view details