ಬಳ್ಳಾರಿ: ಹೊಸಪೇಟೆಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ರವಿಕುಮಾರ್ ಅವರು, ಶ್ರೀರಾಮುಲು ಅವರಿಗೆ ಸಿದ್ದರಾಮಯ್ಯನವರು ಪೆದ್ದ ಎಂದು ಹೇಳಿದ್ದು, ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ರಾಜಕೀಯವಾಗಿ ಟೀಕೆ ಮಾಡಲಿ, ಅದನ್ನು ಬಿಟ್ಟು ವೈಯಕ್ತಿಕವಾಗಿ ಈ ರೀತಿ ಮಾತನಾಡುವುದು ಶೋಭೆ ತರಲ್ಲ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ವಿರುದ್ಧ ರವಿಕುಮಾರ್ ವಾಗ್ದಾಳಿ : ಕ್ಷಮೆ ಕೇಳಲು ಆಗ್ರಹ - ಸಿದ್ದರಾಮಯ್ಯ ವಿರುದ್ಧ ಬಿಜೆಪಿಯ ರವಿಕುಮಾರ್ ವಾಗ್ದಾಳಿ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು, ಸಚಿವ ಶ್ರೀರಾಮುಲು ಅವರಲ್ಲಿ ಕ್ಷಮೆ ಕೇಳಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಆಗ್ರಹಿಸಿದರು.
ಅವರಿಗೆ ಪಕ್ಷದಲ್ಲಿ ಯಾರೂ ಬೆಂಬಲ ನೀಡುತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ, ಕೆ.ಹೆಚ್. ಮುನಿಯಪ್ಪ, ಜನಾರ್ದನ ಪೂಜಾರಿ ಇವರೆಲ್ಲ ಅವರಿಂದ ದೂರ ಉಳಿದುಕೊಂಡಿದ್ದಾರೆ. ಅವರು ಯಾರನ್ನು ರಾಜಕೀಯವಾಗಿ ಮುಂದುವರೆಯಲು ಬಿಡಲಿಲ್ಲ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ನೂರು ಮೀಟರಿನಷ್ಟು ಗುಂಡಿಗಳಿವೆ, ಮೊದಲು ಅದನ್ನು ಮುಚ್ಚಿಕೊಳ್ಳಲಿ ನಂತರ ಬೇರೆ ಪಕ್ಷದ ಬಗ್ಗೆ ಮಾತನಾಡಲಿ ಎಂದು ಹರಿಹಾಯ್ದರು. ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಚಾಮುಂಡಿ ಕ್ಷೇತ್ರದಲ್ಲಿ ಒಬ್ಬ ಮುಖ್ಯಮಂತ್ರಿಯಾಗಿ ಗೆಲ್ಲುವುದಕ್ಕಾಗಲಿಲ್ಲ. ಬಾದಾಮಿಯಲ್ಲಿ ಅಲ್ಪಮತಗಳ ಅಂತರದಲ್ಲಿ ಗೆದ್ದಿದ್ದಾರೆ ಎಂದು ಟೀಕಿಸಿದರು.