ಕರ್ನಾಟಕ

karnataka

ETV Bharat / state

ಬಳ್ಳಾರಿ: ಹೆಂಡತಿ ಅಡುಗೆ ಸರಿಯಾಗಿ ಮಾಡಿಲ್ಲವೆಂದು ನವವಿವಾಹಿತ ಆತ್ಮಹತ್ಯೆ..! - ಬಳ್ಳಾರಿ ಲೇಟೆಸ್ಟ್​ ಕ್ರೈಮ್​

ಬಳ್ಳಾರಿ ಜಿಲ್ಲೆಯಲ್ಲಿ ಪತ್ನಿ ಅಡುಗೆ ಸರಿಯಾಗಿ ಮಾಡುತ್ತಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

sdsdd
ನವವಿವಾಹಿತ ಆತ್ಮಹತ್ಯೆ..!

By

Published : Aug 7, 2020, 10:01 AM IST

ಬಳ್ಳಾರಿ: ಹೆಂಡತಿ ಸರಿಯಾಗಿ ಅಡುಗೆ ಮಾಡಲಿಲ್ಲ ಎಂದು ಆಕೆಯೊಂದಿಗೆ ಮುನಿಸಿಕೊಂಡ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.

ಹುರುಳಿಹಾಳ್ ಗ್ರಾಮದ ಶರಣೇಶ (29) ಮೃತ ವ್ಯಕ್ತಿ.‌ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಮೃತ ಶರಣೇಶ ತನ್ನ ಕುಟುಂಬದವರು ನಿಶ್ಚಯಿಸಿದ ಯುವತಿಯೊಂದಿಗೆ ವಿವಾಹವಾಗಿದ್ದ. ನವ ವಿವಾಹಿತೆಗೆ ಗಂಡನ ಮನೆಗೆ ಬಂದಾಗಿನಿಂದಲೂ ಸರಿಯಾಗಿ ಅಡುಗೆ ಮಾಡಲು ಬರುತ್ತಿರಲಿಲ್ಲ. ಇದು ದಂಪತಿ ನಡುವೆ ವೈಮನಸ್ಸಿಗೆ ಕಾರಣವಾಗಿತ್ತು.

ಇದರಿಂದ ಮನನೊಂದ ನವ ವಿವಾಹಿತ ಗ್ರಾಮದ ಹೊರವಲಯದಲ್ಲಿರುವ ಹೊಲಕ್ಕೆ ತೆರಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಹೊಸಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details