ಹೊಸಪೇಟೆ (ವಿಜಯನಗರ): ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಇಂದಿನಿಂದ ನೈಟ್ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಮಾಹಿತಿ ನೀಡಿದ್ದಾರೆ.
ಹೀಗಾಗಿ ನೈಟ್ಕರ್ಫ್ಯೂಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಂದು ಸಂಜೆ ಹೊತ್ತಿದೆ ಎಲ್ಲಿ ಎಷ್ಟು ಜನ ಸಿಬ್ಬಂದಿ ನೇಮಿಸಬೇಕು ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ. ಕರ್ಫ್ಯೂ ವೇಳೆ ಅನಗತ್ಯವಾಗಿ ಹೊರ ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ನೈಟ್ಕರ್ಪ್ಯೂ ಜಾರಿ ಕುರಿತು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಮಾಹಿತಿ ಹೊಸಪೇಟೆಯಲ್ಲಿ ಸದ್ಯ 366 ಸಕ್ರೀಯ ಪ್ರಕರಣಗಳಿವೆ. ಈ ಪೈಕಿ 44 ಜನರು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದವರು ಹೋಮ್ ಐಸೋಲೇಷನ್ನಲ್ಲಿದ್ದಾರೆ. ನಮ್ಮಲ್ಲಿ ಬೆಡ್ ಕೊರತೆ ಇಲ್ಲ. ಹೊಸಪೇಟೆ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಆಸ್ಪತ್ರೆಗಳ ಸಿದ್ಧ ಮಾಡಲಾಗಿದೆ. 100ಕ್ಕೂ ಅಧಿಕ ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಕಲಬುರಿಗಿ ಜಿಲ್ಲೆಯಲ್ಲಿ ಈಗ ಬೆಡ್ಗಳ ಕೊರತೆ.. ಇನ್ನೂ ಎಚ್ಚೆತ್ತಕೊಳ್ಳದ ಸರ್ಕಾರ, ಆಕ್ರೋಶ