ಬಳ್ಳಾರಿ/ಹೊಸಪೇಟೆ: ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಆ. 15ರಂದು ತುಂಗಭದ್ರಾ ಜಲಾಶಯ ಹಾಗೂ ಉದ್ಯಾನವನಗಳಿಗೆ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಜಿ.ನಾಗಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಂಗಭದ್ರಾ ಜಲಾಶಯ ವೀಕ್ಷಣೆಗೆ ಆ. 15ರಂದು ಸಾರ್ವಜನಿಕರಿಗೆ ನಿರ್ಬಂಧ - Bellary
ಕೊರೊನಾ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ತುಂಗಭದ್ರಾ ಜಲಾಶಯ ಹಾಗೂ ಉದ್ಯಾನವನಗಳಿಗೆ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದೆ.
ತುಂಗಭದ್ರ ಮಂಡಳಿಯಿಂದ ಪ್ರಕಟಣೆ
ಜಿಲ್ಲೆಯಲ್ಲಿ ಹಾಗೂ ಹೊಸಪೇಟೆ ತಾಲೂಕಿನಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿವೆ. ಪ್ರವಾಸಿ ತಾಣವಾದ ತುಂಗಭದ್ರಾ ಜಲಾಶಯ ಹಾಗೂ ಉದ್ಯಾನವನಗಳಿಗೆ ಆ. 15ರಂದು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆ. 15ರಂದು ತುಂಗಭದ್ರಾ ಜಲಾಶಯ ಹಾಗೂ ಉದ್ಯಾನವನಗಳಿಗೆ ಭೇಟಿ ನೀಡಬಾರದು. ಆ. 16ವರೆಗೂ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.