ಬಳ್ಳಾರಿ: ಬೇಸಿಗೆ ಆರಂಭವಾದ ಹಿನ್ನೆಲೆಯಲ್ಲಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸೋದಕ್ಕೆ ಯಾವುದೇ ವಿನಾಯಿತಿ ನೀಡಿಲ್ಲ. ಹೀಗಾಗಿ ಸಾರ್ವಜನಿಕರು ಯಾವುದೇ ಊಹಾಪೋಹದ ಸುದ್ದಿಗೆ ಕಿವಿಗೊಡಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸುವುದಕ್ಕೆ ವಿನಾಯಿತಿ ಇಲ್ಲ: ಎಸ್ಪಿ ಸ್ಪಷ್ಟನೆ - ಸ್ಪಷ್ಟನೆ ನೀಡಿದ ಎಸ್ಪಿ
ಗಣಿಜಿಲ್ಲೆಯ ವಿಧಾನ ಪರಿಷತ್ ಸದಸ್ಯರೊಬ್ಬರು ಬಿರು ಬೇಸಿಗೆ ಹಿನ್ನೆಲೆಯಲ್ಲಿ ಕಲಬುರಗಿ ವಿಭಾಗದ ಅವಳಿ ಜಿಲ್ಲೆಗಳಿಗೆ ಹೆಲ್ಮೆಟ್ ಧರಿಸೋದರಲ್ಲಿ ವಿನಾಯಿತಿ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ. ಈ ಕುರಿತಂತೆ ಎಸ್ಪಿ ಸೈದುಲು ಅಡಾವತ್ ಸ್ಪಷ್ಟನೆ ನೀಡಿದ್ದಾರೆ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸೋದಕ್ಕೆ ಯಾವುದೇ ವಿನಾಯಿತಿ ನೀಡಿಲ್ಲ. ಹೀಗಾಗಿ ಸಾರ್ವಜನಿಕರು ಯಾವುದೇ ಊಹಾಪೋಹದ ಸುದ್ದಿಗೆ ಕಿವಿಗೊಡಬಾರದು ಎಂದಿದ್ದಾರೆ.
ಎಸ್ಪಿ ಕಚೇರಿಯಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಗಣಿಜಿಲ್ಲೆಯ ವಿಧಾನ ಪರಿಷತ್ ಸದಸ್ಯರೊಬ್ಬರು ಬಿರು ಬೇಸಿಗೆ ಹಿನ್ನೆಲೆಯಲ್ಲಿ ಕಲಬುರಗಿ ವಿಭಾಗದ ಅವಳಿ ಜಿಲ್ಲೆಗಳಿಗೆ ಹೆಲ್ಮೆಟ್ ಧರಿಸೋದರಲ್ಲಿ ವಿನಾಯಿತಿ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ. ಆ ಕುರಿತು ಏನಾದರೂ ಪ್ರತಿಕ್ರಿಯೆ ಬಂದಿದೆಯಾ ಎಂದು ಕೇಳಿದ ಪ್ರಶ್ನೆಗೆ ಎಸ್ಪಿ ಉತ್ತರಿಸಿದರು.
ಇದು ಕೇಂದ್ರ ಸರ್ಕಾರದ ಆದೇಶವಾಗಿದೆ. ಮೇಲಾಗಿ ಸುಪ್ರೀಂ ಕೋರ್ಟ್ ಪ್ರತಿ ಕ್ಷಣಕ್ಷಣದ ಅಪ್ಡೇಟ್ ಬಗ್ಗೆ ಕೇಳುತ್ತಿದೆ. ಹಾಗಾಗಿ ಹೆಲ್ಮೆಟ್ ಧರಿಸೋದಕ್ಕೆ ಯಾವುದೇ ವಿನಾಯಿತಿ ನೀಡಲ್ಲ, ನೀಡೋದೂ ಇಲ್ಲ. ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. ರಸ್ತೆ ಸುರಕ್ಷತಾ ಸಪ್ತಾಹ ಕಾಯ್ದೆ ಅನ್ವಯ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಅದರಲ್ಲಿ ವಿನಾಯಿತಿ ನೀಡಲು ಬರುವುದಿಲ್ಲ ಎಂದರು.