ಹುಬ್ಬಳ್ಳಿ: ಲಾಕ್ಡೌನ್ ಸಡಿಲಿಕೆ ಮಾಡಿದ ಬಳಿಕ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಸಾರಿಗೆ ಸಂಸ್ಥೆ ಸಿಬ್ಬಂದಿ ಆರೋಗ್ಯದ ಬಗ್ಗೆ ಸರ್ಕಾರವಾಗಲಿ, ಸಾರಿಗೆ ಸಂಸ್ಥೆಯಾಗಲೀ ಕಾಳಜಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಸಾರಿಗೆ ಸಂಸ್ಥೆಯ ಬೇಜವಾಬ್ದಾರಿ: ಎಲ್ಲೆಂದರಲ್ಲಿ ಕುಳಿತು ಊಟ ಮಾಡುತ್ತಿದ್ದಾರೆ ನೌಕರರು - hubli news
ಕೊರೊನಾ ವೈರಸ್ ಭೀತಿಯ ನಡುವೆಯೂ ಸಾರಿಗೆ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ರೋಗದ ಭಯವನ್ನು ಬಿಟ್ಟು ಸಾರ್ವಜನಿಕರ ಸೇವೆಗೆ ಮುಂದಾಗಿರುವ ಸಾರಿಗೆ ಸಿಬ್ಬಂದಿಯ ಆರೋಗ್ಯದ ಬಗ್ಗೆ ಮಾತ್ರ ಯಾವುದೇ ಅಧಿಕಾರಿಗಳು ಕಾಳಜಿ ವಹಿಸುತ್ತಿಲ್ಲ.
ಕೊರೊನಾ ವೈರಸ್ ಭೀತಿಯ ನಡುವೆಯೂ ಸಾರಿಗೆ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ರೋಗದ ಭಯವನ್ನು ಬಿಟ್ಟು ಸಾರ್ವಜನಿಕ ಸೇವೆಗೆ ಮುಂದಾಗಿರುವ ಸಾರಿಗೆ ಸಿಬ್ಬಂದಿಯ ಆರೋಗ್ಯದ ಬಗ್ಗೆ ಮಾತ್ರ ಯಾವುದೇ ಅಧಿಕಾರಿಗಳು ಕಾಳಜಿ ವಹಿಸುತ್ತಿಲ್ಲ. ಹುಬ್ಬಳ್ಳಿ ಹೊಸೂರ ಬಸ್ ನಿಲ್ದಾಣದಲ್ಲಿ ಚಾಲಕರು ಹಾಗೂ ನಿರ್ವಾಹಕರು ನೆಮ್ಮದಿಯಾಗಿ ಊಟ ಮಾಡಲು ಹಾಗೂ ಕುಡಿಯಲು ನೀರಿನ ವ್ಯವಸ್ಥೆ ಕೂಡ ಮಾಡಿಲ್ಲ.
ಎಲ್ಲೆಂದರಲ್ಲಿ ಧೂಳು ತುಂಬಿರುವ ಕಟ್ಟಡದ ಹೊರಾಂಗಣದಲ್ಲಿಯೇ ಕುಳಿತುಕೊಂಡು ಊಟ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಕೇವಲ ಮಾಸ್ಕ್ ಮಾತ್ರ ನೀಡಿದ್ದು, ಹ್ಯಾಂಡ್ ಗ್ಲೌಸ್ ನೀಡಿಲ್ಲ.