ಬಳ್ಳಾರಿ: ಕೊರೊನಾ ಆರಂಭವಾದಾಗಿನಿಂದ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮಾರ್ಪಟ್ಟಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯನ್ನು ಮತ್ತೆ ಮುಂಚೆಯಂತೆ ಎಲ್ಲಾ ರೋಗಿಗಳ ಸೇವೆಗೆ ಅಂದರೆ ನಾನ್ ಕೋವಿಡ್ ಚಿಕಿತ್ಸೆ ನೀಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ. ಎನ್. ಬಸರೆಡ್ಡಿ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಳೆಯಿಂದ ನಾನ್ ಕೋವಿಡ್ ರೋಗಿಗಳ ಚಿಕಿತ್ಸೆ ಆರಂಭ - Non-Kovid patients]
ನಾಳೆಯಿಂದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾನ್ ಕೋವಿಡ್ ಚಿಕಿತ್ಸೆಗಳು ಆರಂಭವಾಗಲಿವೆ ಎಂದು ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ. ಎನ್. ಬಸರೆಡ್ಡಿ ತಿಳಿಸಿದ್ದಾರೆ.
ಡಾ.ಎನ್.ಬಸರೆಡ್ಡಿ
ಅ.9ರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ನಾನ್ ಕೋವಿಡ್ ಚಿಕಿತ್ಸೆಗಳು ಆರಂಭವಾಗಲಿದ್ದು, ಹೊರ ಮತ್ತು ಒಳರೋಗಿಗಳ ವಿಭಾಗವನ್ನು ಶುಕ್ರವಾರದಿಂದ ಆರಂಭಿಸಲಾಗುವುದು. ಜಿಲ್ಲೆಯ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.