ಬಳ್ಳಾರಿ:ವಿಮ್ಸ್ ದುರಂತದಲ್ಲಿ ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮ್ಸ್ ಅಧೀಕ್ಷಕ ಸೇರಿ ಐವರಿಗೆ ಕಾರಣ ಕೇಳಿ ನೋಟಿಸ್ ಕೊಡಲಾಗಿದೆ. ಬುಧವಾರ ವಿದ್ಯುತ್ ಕಡಿತ, ಜನರೇಟರ್ ದೋಷ ಹಾಗು ವೆಂಟಿಲೇಟರ್‌ಗಳಿಗೆ ಬ್ಯಾಟರಿ ಬಲವಿಲ್ಲದೆ ಸಂಭವಿಸಿದೆ ಎನ್ನಲಾದ ಸಾವುಗಳಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂಬ ಶಂಕೆ ವ್ಯಕ್ತಪಡಿಸಲಾಗಿದೆ.
ದುರ್ಘಟನೆಯ ಕುರಿತು ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಸಮಿತಿ ರಚಿಸಿದ್ದು, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಎಲ್.ಜನಾರ್ದನ್ರಿಂದ ವರದಿ ತರಿಸಿಕೊಂಡಿದ್ದಾರೆ. ಬಳಿಕ ಸ್ಥಾನಿಕ ವೈದ್ಯಾಧಿಕಾರಿ, ವೈದ್ಯಕೀಯ ಸೂಪರಿಂಟೆಂಡೆಂಟ್, ತೀವ್ರ ನಿಗಾ ಘಟಕದಲ್ಲಿ ಕರ್ತವ್ಯನಿರತರಾಗಿದ್ದ ವೈದ್ಯರು ಮತ್ತು ನರ್ಸಿಂಗ್ ಸೂಪರಿಂಟೆಂಡೆಂಟ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ.