ಕರ್ನಾಟಕ

karnataka

ETV Bharat / state

ಬಳ್ಳಾರಿಯ ಸಿರಗುಪ್ಪದಲ್ಲಿ ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ - ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು

ಬಳ್ಳಾರಿಯ ಸಿರಗುಪ್ಪ ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ. ಈವರೆಗೂ ಕೂಡ ಅಂದಾಜು 23 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

Number of infected persons crossing thousand in Sirguppa
ಬಳ್ಳಾರಿಯ ಸಿರಗುಪ್ಪದಲ್ಲಿ ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

By

Published : May 9, 2021, 9:29 PM IST

ಬಳ್ಳಾರಿ:ಜಿಲ್ಲೆಯ ಸಿರಗುಪ್ಪ ತಾಲೂಕಿನಲ್ಲಿ ಮಹಾಮಾರಿ‌ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕೇವಲ ಎರಡೇ ತಿಂಗಳಲ್ಲಿ 1196ಕ್ಕೂ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಏಪ್ರಿಲ್-ಮೇ ತಿಂಗಳಲ್ಲೇ ಅಂದಾಜು ಸಾವಿರ ಗಡಿ ದಾಟಿದ್ದು, ಈವರೆಗೂ ಕೂಡ ಅಂದಾಜು 23 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸಿರಗುಪ್ಪ ನಗರದಲ್ಲಿ ಸುಮಾರು 571 ಪ್ರಕರಣಗಳು ದಾಖಲಾಗಿರೋದು ಕೂಡ ಜನರ ನಿದ್ದೆಗೆಡಿಸಿದೆ. ಈ ಪೈಕಿ ಸಾರ್ವಜನಿಕ ಆಸ್ಪತ್ರೆಯಲ್ಲಿ 70 ರೋಗಿಗಳು ಆಕ್ಸಿಜನ್ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. 6 ಮಂದಿ ಕೋವಿಡ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ತೀವ್ರ ಸೊಂಕಿನಿಂದ ಬಳಲುತ್ತಿರುವ 67 ಮಂದಿ ಸೋಂಕಿತರು ಜಿಲ್ಲಾ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನ ತೀವ್ರತೆ ಇಲ್ಲದಿರುವ 372 ಮಂದಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ತಾಲೂಕಿನಲ್ಲಿ 611 ಮಂದಿ ಗುಣಮುಖರಾಗಿರೋದು ಕೊಂಚ ಸಮಾಧಾನದ ಸಂಗತಿಯಾಗಿದೆ.

ABOUT THE AUTHOR

...view details