ಬಳ್ಳಾರಿ: ಕೋವಿಡ್ ನಿಯಂತ್ರಣದ ಸಲುವಾಗಿ ರಾಜ್ಯ ಸರ್ಕಾರ ಶತಾಯಗತಾಯ ಪ್ರಯತ್ನ ನಡೆಸಿದ್ರೂ ರಾಜ್ಯವ್ಯಾಪಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಿರೋದು ಒಂದೆಡೆಯಾದ್ರೆ, ಮತ್ತೊಂದೆಡೆ ಕೋವಿಡ್ ನಿಯಂತ್ರಣದ ಸೇವೆಗಾಗಿ ನಮ್ಮನ್ನು ಬಳಸಿಕೊಳ್ಳಿ ಎಂದು ರಾಜ್ಯ ಸರ್ಕಾರದ ಮುಂದೆ ರಾಜ್ಯದ ಆಪರೇಷನ್ ಥಿಯೇಟರ್ ಟೆಕ್ನಾಲಜಿಸ್ಟ್ಗಳು ಅಲವತ್ತುಕೊಂಡಿದ್ದಾರೆ.
ಕಳೆದ ಮಾರ್ಚ್ ತಿಂಗಳಿಂದಲೂ ಕೂಡ ರಾಜ್ಯ ಸರ್ಕಾರದ ಮುಂದೆ ಇಂತಹದೊಂದು ಬೇಡಿಕೆಯನ್ನಿಟ್ಟು ಕೋವಿಡ್ ಸೇವೆಗೆ ಸ್ವಯಂ ಪ್ರೇರಿತವಾಗಿ ಮುಂದಾಗಿದ್ದಾರೆ. ಅನಿವಾರ್ಯ ಕಾರಣಗಳಿಂದ ಕೆಲವರು ಒಲ್ಲದ ಮನಸ್ಸಿನಿಂದ ಈ ಕೋವಿಡ್ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಇಷ್ಟಿದ್ದರೂ ಕೂಡ ಕೋವಿಡ್ ಸೇವೆಗೆ ಸ್ವತಃ ನಾವೇ ಬರುತ್ತೇವೆ ಎಂದು ಕೇಳಿಕೊಂಡ್ರೂ ರಾಜ್ಯ ಸರ್ಕಾರ ಮಾತ್ರ ಒಪ್ಪುತ್ತಿಲ್ಲ ಎಂದು ಆಪರೇಷನ್ ಥಿಯೇಟರ್ ಟೆಕ್ನಾಲಜಿಸ್ಟ್ಗಳು ಬೇಸರ ವ್ಯಕ್ತಪಡಿಸಿದ್ದಾರೆ.