ಕರ್ನಾಟಕ

karnataka

ETV Bharat / state

ಓಎಂಸಿ ಗಣಿ ಅಕ್ರಮ ಬಯಲಿಗೆಳೆದ ಡಿಎಫ್​​ಒ ಕಡ್ಡಾಯ ನಿವೃತ್ತಿ ಘೋಷಣೆಗೆ ಟಪಾಲ್​​ ಗಣೇಶ ವಿರೋಧ - ಅರಣ್ಯ ಸೇವಾಧಿಕಾರಿ ಕಲ್ಲೋರ್ ಬಿಸ್ವಾಸ್

ಮಾಜಿ ಸಚಿವ ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಗಣಿ ಅಕ್ರಮ ಬಯಲಿಗೆಳೆದ ನೆರೆಯ ಆಂಧ್ರಪ್ರದೇಶದ ಭಾರತೀಯ ಅರಣ್ಯ ಸೇವಾಧಿಕಾರಿ ಕಲ್ಲೋರ್ ಬಿಸ್ವಾಸ್ ಅವರನ್ನು ಕೇಂದ್ರ ಸರ್ಕಾರ ಕಡ್ಡಾಯ ನಿವೃತ್ತಿ ಪಡೆಯುವಂತೆ ಸೂಚಿಸಿರುವುದಕ್ಕೆ ಗಣಿ ಉದ್ಯಮಿ ಟಪಾಲ್ ಗಣೇಶ ವಿರೋಧ ವ್ಯಕ್ತಪಡಿಸಿದ್ದಾರೆ.

ಟಪಾಲ್ ಗಣೇಶ

By

Published : Aug 4, 2019, 12:31 PM IST

ಬಳ್ಳಾರಿ:ಮಾಜಿ ಸಚಿವ ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಗಣಿ ಅಕ್ರಮ ಬಯಲಿಗೆಳೆದ ನೆರೆಯ ಆಂಧ್ರಪ್ರದೇಶದ ಭಾರತೀಯ ಅರಣ್ಯ ಸೇವಾಧಿಕಾರಿ ಕಲ್ಲೋರ್ ಬಿಸ್ವಾಸ್ ಅವರನ್ನು ಕೇಂದ್ರ ಸರ್ಕಾರ ಕಡ್ಡಾಯ ನಿವೃತ್ತಿ ಪಡೆಯುವಂತೆ ಸೂಚಿಸಿರುವುದಕ್ಕೆ ಗಣಿ ಉದ್ಯಮಿ ಟಪಾಲ್ ಗಣೇಶ ವಿರೋಧ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯಲ್ಲಿಂದು ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಮೊದಮೊದಲು ಓಎಂಸಿ ಕಂಪನಿಯ ಪರವಾಗಿ ಕಾರ್ಯನಿರ್ವಹಿಸಿದ್ದ ಈ ಅಧಿಕಾರಿ ಕಾಲಕ್ರಮೇಣ ತಮ್ಮ ಕಾರ್ಯವೈಖರಿಯನ್ನು ಬದಲಿಸಿಕೊಂಡಿದ್ದರು. ಓಎಂಸಿ ಕಂಪನಿಯ ವಿರುದ್ಧ ವಿಸ್ತ್ರೃತವಾಗಿ ವರದಿಯನ್ನು ಮಾಡಿದ್ದ ಆ ಅಧಿಕಾರಿಯನ್ನೇ ಕೇಂದ್ರ ಸರ್ಕಾರ ಕಡ್ಡಾಯ ನಿವೃತ್ತಿ ಪಡೆಯುವಂತೆ ಸೂಚಿಸಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

2008ರಲ್ಲಿ ಗಣಿ ಅಕ್ರಮದ ರೂವಾರಿಯಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಸಾವಿರಾರು ಕೋಟಿ ರೂ.ಗಳ ಅಕ್ರಮ ಆಸ್ತಿ ಸಂಪಾದನೆ ವೇಳೆಯೂ ಈ ಅಧಿಕಾರಿ ಪಾಲಿದ್ದು, ಅವರ ಅಕ್ರಮ ಆಸ್ತಿಯನ್ನು ಬಯಲಿಗೆಳೆಯುವ ಕಾರ್ಯಕ್ಕೂ ಅವರು ಮುಂದಾಗಿದ್ದರು. ಪರ, ವಿರೋಧವಾಗಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಯನ್ನು ಕಡ್ಡಾಯ ನಿವೃತ್ತಿ ಘೋಷಣೆ ಮಾಡಿರೋದೇ ಯಕ್ಷಪ್ರಶ್ನೆಯಾಗಿದೆ.‌ ಆ ಅಧಿಕಾರಿಯನ್ನೇ ಬಳಸಿಕೊಂಡು ಅಕ್ರಮ ಆಸ್ತಿ ಗಳಿಕೆ ಮಾಡಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಈವರೆಗೂ ಯಾವುದೇ ಶಿಸ್ತು ಕ್ರಮ ಜರುಗಿಸಲು ಮುಂದಾಗಿಲ್ಲ ಎಂದು ದೂರಿದ್ದಾರೆ.

ಟಪಾಲ್ ಗಣೇಶ

ನೆರೆಯ ಅನಂಪುರದ ಡಿಎಫ್​​ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಜನಾರ್ದನ ರೆಡ್ಡಿಗೆ ಸೇರಿದ ಓಬಳಾಪುರಂ ಗಣಿ ಕಂಪನಿಗೆ ಸಂಬಂಧಿಸಿದ ವಿವಾದಿತ ವಿಷಯವನ್ನು ನಿರ್ವಹಿಸುವಾಗ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸೇವಾ ದಾಖಲೆಯ ಪರಿಶೀಲನೆ ವರದಿಯಲ್ಲಿ ಆರೋಪಿಸಲಾಗಿದೆ. ಅಲ್ಲದೇ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೇ ಕರ್ತವ್ಯದಿಂದ ವಿಮುಖರಾಗಿದ್ದರು ಎಂಬ ಕಾರಣವೊಡ್ಡಿ ಅವರನ್ನು ಕಡ್ಡಾಯ ನಿವೃತ್ತಿ ಪಡೆಯುವಂತೆ ಕೇಂದ್ರ ಸರ್ಕಾರದ ಸೂಚಿಸಿರೋದು ಹಾಸ್ಯಾಸ್ಪದ ಆಗಿದೆ. ಅಲ್ಲದೇ, ಆಂಧ್ರಪ್ರದೇಶ ಸರ್ಕಾರಕ್ಕೆ ಆದೇಶ ಪ್ರತಿಯನ್ನು ರವಾನಿಸೋರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ABOUT THE AUTHOR

...view details