ಬಳ್ಳಾರಿ:ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯನ್ನ ವಿರೋಧಿಸಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಇಂದು ಹನ್ನೊಂದನೆ ದಿನಕ್ಕೆ ಕಾಲಿಟಿದ್ದು, ಕರ್ನಾಟಕ ರಕ್ಷಣಾ ವೇದಿಕೆಯ ಯುವ ಸೇನೆಯು ಬೆಂಬಲ ಸೂಚಿಸಿದೆ.
ಇಲ್ಲಿನ ಡಿಸಿ ಕಚೇರಿಯ ಎದುರು ಸ್ಥಾಪಿಸಲಾದ ತಾತ್ಕಾಲಿಕ ಟೆಂಟ್ನಲ್ಲಿ ನಾನಾ ಸಂಘಟನೆಗಳ ಮುಖಂಡರೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಪದಾಧಿಕಾರಿಗಳು ಪಾಲ್ಗೊಂಡು ಕೆಲಕಾಲ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.