ಬಳ್ಳಾರಿ:ರಾಜ್ಯ ಸರ್ಕಾರವು ನೂತನ ವಿಜಯನಗರ ಜಿಲ್ಲೆ ಘೋಷಣೆ ಮಾಡಿರುವುದನ್ನು ವಿರೋಧಿಸಿ ಇಂದು ಕರ್ನಾಟಕ ಜನಸೈನ್ಯ ಸಂಘಟನೆಯಿಂದ ತೆರೆದ ಅಂಚೆ ಚಳವಳಿಯನ್ನ ನಡೆಸಲಾಯಿತು.
ನೂತನ ವಿಜಯನಗರ ಜಿಲ್ಲೆ ಘೋಷಣೆಗೆ ವಿರೋಧ: ತೆರೆದ ಅಂಚೆ ಚಳವಳಿ - Open Postal Movement start
ನೂತನ ವಿಜಯನಗರ ಜಿಲ್ಲೆ ಘೋಷಣೆಗೆ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ಜನಸೈನ್ಯ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಕೆ. ಎರಿಸ್ವಾಮಿ ನೇತೃತ್ವದಲ್ಲಿ ನೂರಾರು ಮಂದಿ ಕಾರ್ಯಕರ್ತರು ತೆರೆದ ಅಂಚೆ ಚಳವಳಿಯಲ್ಲಿ ಪಾಲ್ಗೊಂಡರು.
ಬಳ್ಳಾರಿ ನಗರದ ಗಡಿಗಿ ಚನ್ನಪ್ಪ ವೃತ್ತದ ಬಳಿ ಇಂದು ಈ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಕೆ. ಎರಿಸ್ವಾಮಿ ನೇತೃತ್ವದಲ್ಲಿ ನೂರಾರು ಮಂದಿ ಕಾರ್ಯಕರ್ತರು ಈ ಚಳವಳಿಯಲ್ಲಿ ಪಾಲ್ಗೊಂಡು ಅಂಚೆ ಪತ್ರದ ಮೂಲಕ ನೂತನ ವಿಜಯನಗರ ಜಿಲ್ಲೆ ಘೋಷಣೆಗೆ ವಿರೋಧ ವ್ಯಕ್ತಪಡಿಸಿದರು. ಅಖಂಡ ಬಳ್ಳಾರಿ ಜಿಲ್ಲೆಯ ವಿಭಜನೆ ಖಂಡಿಸಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಿಗೆ ಈ ಅಂಚೆ ಚೀಟಿಗಳನ್ನ ರವಾನಿಸಿದ್ದಾರೆ.
ಜನಸೈನ್ಯ ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಬಿ. ಹೊನ್ನೂರಪ್ಪ, ಪದಾಧಿಕಾರಿಗಳಾದ ಲಕ್ಷ್ಮಿ ನಾರಾಯಣ ಶೆಟ್ಟಿ, ಚೆಂಚಯ್ಯ, ಫಯಾಜ್ ಭಾಷಾ, ನಾಸೀರ್, ರಾಧಾಕೃಷ್ಣ, ಮುರಳಿ, ಗುರುರಾಜ, ಚಿಟ್ಟಿ, ಆನಂದ, ಶ್ರೀನಿವಾಸ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.