ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ ನದಿಗೆ ಅಂದಾಜು 1.25 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟ ಪರಿಣಾಮ ಕಂಪ್ಲಿ ಕೋಟೆ ಬಳಿಯ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.
ತುಂಬಿ ಹರಿದ ತುಂಗಭದ್ರೆ; ಕಂಪ್ಲಿ ಸೇತುವೆ ಜಲಾವೃತ - ತುಂಬಿ ಹರಿದ ತುಂಗಭದ್ರೆ
ಬಳ್ಳಾರಿ ಜಿಲ್ಲೆಯ ಜೀವನಾಡಿ ತುಂಗಭದ್ರಾ ಜಲಾಶಯದಿಂದ ನದಿಗೆ ಅಂದಾಜು 1.25 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಪರಿಣಾಮ ಕಂಪ್ಲಿ ಕೋಟೆ ಬಳಿಯ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.
![ತುಂಬಿ ಹರಿದ ತುಂಗಭದ್ರೆ; ಕಂಪ್ಲಿ ಸೇತುವೆ ಜಲಾವೃತ](https://etvbharatimages.akamaized.net/etvbharat/prod-images/768-512-4103469-thumbnail-3x2-vvvv.jpg)
ಕಂಪ್ಲಿ ಸೇತುವೆ ಜಲಾವೃತ
ಕಂಪ್ಲಿ- ಗಂಗಾವತಿ ನಡುವಿನ ಸಂಪರ್ಕ ಕೊಂಡಿಯಾಗಿರುವ ಈ ಸೇತುವೆಯಲ್ಲಿ ಈಗ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ತುಂಗಭದ್ರಾ ಜಲಾಶಯಕ್ಕೆ ತುಂಗಾ ಮತ್ತು ಭದ್ರ ಜಲಾಶಯದಿಂದ ಸರಿ ಸುಮಾರು 2 ಲಕ್ಷ ಕ್ಯೂಸೆಕ್ಗೂ ಅಧಿಕ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ.
ಕಂಪ್ಲಿ ಸೇತುವೆ ಜಲಾವೃತ
ಹೀಗಾಗಿ ಈ ತುಂಗಭದ್ರಾ ನದಿ ಪಾತ್ರದ ಕೋಟೆ ಪ್ರದೇಶದ ವ್ಯಾಪ್ತಿಯ ಆಂಜನೇಯ ದೇಗುಲ ಹಾಗೂ ನದಿಪಾತ್ರದಲ್ಲಿನ ಮನೆಗಳಿಗೆ ನದಿ ನೀರು ನುಗ್ಗಿದೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.