ಬಳ್ಳಾರಿ: ಹರಪನಹಳ್ಳಿ ತಾಲೂಕಿನ ತುಂಗಭದ್ರಾ ನದಿ ತೀರದ ಪ್ರವಾಹ ಪೀಡಿತ ಗರ್ಭಗುಡಿ, ಹಲವಾಗಲು ಪ್ರದೇಶಗಳಿಗೆ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತುಂಗಭದ್ರಾ ನದಿ ತೀರದ ಪ್ರವಾಹ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ - ಬಳ್ಳಾರಿ ಮಳೆ ಹಾನಿ ಪ್ರದೇಶಗಳು
ತುಂಗಭದ್ರಾ ನದಿ ತೀರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನದಿ ತೀರದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
![ತುಂಗಭದ್ರಾ ನದಿ ತೀರದ ಪ್ರವಾಹ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ Bellary](https://etvbharatimages.akamaized.net/etvbharat/prod-images/768-512-09:05:50:1596857750-kn-02-bly-080820-adc-news-ka10007-08082020071030-0808f-1596850830-235.jpg)
Bellary
ಹರಪನಹಳ್ಳಿಯ ತಾ.ಪಂ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳು ಸಭೆ ನಡೆಸಿದರು. ತುಂಗಾಭದ್ರಾ ನದಿ ತೀರದ ಪ್ರವಾಹ ಹಾಗೂ ಮಳೆ ಹಾನಿಯ ಕುರಿತಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಹರಪನಹಳ್ಳಿ ಮತ್ತು ಹಡಗಲಿ ತಾಲೂಕಿನ ಕಂದಾಯ, ಕೃಷಿ, ತೋಟಗಾರಿಕೆ, ಪಂಚಾಯತ್ ರಾಜ್, ಪೊಲೀಸ್ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿಗಳೊಂದಿಗೆ ಸಭೆಯಲ್ಲಿ ಚರ್ಚೆ ನಡೆಸಿದರು. ನಂತರ ಅವರು ತುಂಗಾಭದ್ರಾ ನದಿ ತೀರದ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರು, ತಹಶೀಲ್ದಾರ್, ತಾ.ಪಂ ಇಒಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.