ಕರ್ನಾಟಕ

karnataka

ETV Bharat / state

ಬಳ್ಳಾರಿಯ ಮೂರು ತಾಲೂಕಿನಲ್ಲಿ ಖರೀದಿ ಕೇಂದ್ರ ಸ್ಥಾಪನೆ... 5.71 ಲಕ್ಷ ಕ್ವಿಂಟಾಲ್ ಭತ್ತ ಖರೀದಿ ಗುರಿ‌

ಗಣಿ ಜಿಲ್ಲೆಯ ಬಳ್ಳಾರಿ, ಕಂಪ್ಲಿ ಹಾಗೂ ಸಿರುಗುಪ್ಪ ತಾಲೂಕಿನಾದ್ಯಂತ ಭತ್ತದ ಬೆಳೆ ಜಾಸ್ತಿ ಇರೋದರಿಂದ ಮೂರು ತಾಲೂಕುಗಳಲ್ಲಿ ತಲಾ ಒಂದರಂತೆಯೇ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ.

Bellary
Bellary

By

Published : Dec 1, 2020, 7:35 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲಾಗಿದ್ದು, ಈ ಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿ‌ ಕಡ್ಡಾಯಗೊಳಿಸಲಾಗಿದೆ.

ಬಳ್ಳಾರಿಯಲ್ಲಿ ಭತ್ತ ಖರೀದಿ ಕೇಂದ್ರ

ನವೆಂಬರ್ 30ರಂದೇ ಈ ನೋಂದಣಿ ಕಾರ್ಯ ಆರಂಭಿಸಿದ್ದು, ಈವರೆಗೂ ಒಬ್ಬ ರೈತರೂ ಕೂಡ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿಲ್ಲ. ಕೆಲ ತಾಂತ್ರಿಕ ದೋಷಗಳಿಂದಾಗಿ ಈ ಖರೀದಿ ಕೇಂದ್ರಗಳತ್ತ ರೈತರು ಸುಳಿದಿಲ್ಲ ಎನ್ನಲಾಗಿದೆ.

ಗಣಿ ಜಿಲ್ಲೆ ಬಳ್ಳಾರಿ, ಕಂಪ್ಲಿ ಹಾಗೂ ಸಿರುಗುಪ್ಪ ತಾಲೂಕಿನಾದ್ಯಂತ ಭತ್ತದ ಬೆಳೆ ಜಾಸ್ತಿ ಇರೋದರಿಂದ ಈ ಮೂರು ತಾಲೂಕುಗಳಲ್ಲಿ ತಲಾ ಒಂದರಂತೆಯೇ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ. ಭತ್ತದ ಗುಣಮಟ್ಟದ ಪರೀಕ್ಷೆಯ ಇನ್ಸ್​ಪೆಕ್ಟರ್​ ಸೇರಿದಂತೆ ಖರೀದಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಕೆಲ ತಾಂತ್ರಿಕ ದೋಷಗಳಿಂದ ನವೆಂಬರ್ 30ರಂದು ಯಾರೊಬ್ಬ ರೈತರೂ ಕೂಡ ಈ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿಲ್ಲ.

ಈ ಸಂಬಂಧ ಈಟಿವಿ ಭಾರತದೊಂದಿಗೆ ಮಾತನಾಡಿದ ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಸಿ.ಎಂ.ಶ್ರೀಧರ, ಕಳೆದ ಬಾರಿ ಅಂದಾಜು 801 ಮಂದಿ ರೈತರು ಈ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿದ್ದರು. ಸರಿ ಸುಮಾರು 12,800 ಕ್ವಿಂಟಾಲ್ ಭತ್ತ ಖರೀದಿಸಲಾಗಿತ್ತು. ಈ ಬಾರಿ ಕೂಡ ಅಂದಾಜು 5.71 ಲಕ್ಷ ಕ್ವಿಂಟಾಲ್ ಭತ್ತವನ್ನ ಖರೀದಿಸಲು ನಿರ್ಧರಿಸಲಾಗಿದೆ.‌ ಡಿಸೆಂಬರ್ 20ರಿಂದ ಭತ್ತ ಖರೀದಿಸಲು ನಿರ್ಧರಿಸಲಾಗಿದೆ. ಅದಕ್ಕೂ ಮೊದಲು ರೈತರ ನೋಂದಣಿ ಕಡ್ಡಾಯವಾಗಿದೆ ಎಂದರು.

ABOUT THE AUTHOR

...view details