ಬಳ್ಳಾರಿ:ತಾಲೂಕಿನ ರೂಪನಗುಡಿ ಗ್ರಾಮದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಿನ್ನೆಯ ದಿನ ಪರಮದೇವನಹಳ್ಳಿ ಠಾಣೆ ಪೊಲೀಸರು ಬಂದಿಸಿದ್ದಾರೆ.
ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು - undefined
ಬಳ್ಳಾರಿ ಜಿಲ್ಲೆಯ ರೂಪನಗುಡಿ ಗ್ರಾಮದಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಪರಮದೇವನಹಳ್ಳಿ ಠಾಣೆ ಪೊಲೀಸರು ಬಂದಿಸಿದ್ದಾರೆ.
ಆರೋಪಿಗಳು
ಬಳ್ಳಾರಿ ನಗರದ ನಿವಾಸಿ ಹಿತೇಶ ಮತ್ತು ಅಪ್ರಾಪ್ತ ಬಾಲಕನೋರ್ವ ಬಂಧನಕ್ಕೊಳಗಾದವರು. ರೂಪನಗುಡಿಯಿಂದ ಬಳ್ಳಾರಿಗೆ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು, 11 ಸಾವಿರ ರೂ. ಮೌಲ್ಯದ 3.4 ಕೆ.ಜಿ ಗಾಂಜಾ ಹಾಗೂ ಬೈಕ್ ವಶಪಡಿಸಿಕೊಂಡಿದ್ದಾರೆ.
ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ದಾಖಲು ಮಾಡಿದ್ದಾರೆ.