ಕರ್ನಾಟಕ

karnataka

ETV Bharat / state

ಜನಜಾಗೃತಿ ವಸ್ತು ಪ್ರದರ್ಶನಕ್ಕೆ ಚಾಲನೆ: ಜನಾಕರ್ಷಣೀಯ ಕೇಂದ್ರವಾದ ಮಳಿಗೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಹೊಸ ಬಸ್ ನಿಲ್ದಾಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಜನಜಾಗೃತಿ ವಸ್ತು ಪ್ರದರ್ಶನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವರಾಜ ಹೆಡೆ ಚಾಲನೆ ನೀಡಿದ್ದಾರೆ.

ವಸ್ತು ಪ್ರದರ್ಶನಕ್ಕೆ ಚಾಲನೆ

By

Published : Aug 5, 2019, 10:00 AM IST

ಬಳ್ಳಾರಿ:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಹೊಸ ಬಸ್ ನಿಲ್ದಾಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಜನಜಾಗೃತಿ ವಸ್ತು ಪ್ರದರ್ಶನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವರಾಜ ಹೆಡೆ ಚಾಲನೆ ನೀಡಿದ್ದಾರೆ.

ಜನಜಾಗೃತಿ ವಸ್ತು ಪ್ರದರ್ಶನದ ಫಲಕದಲ್ಲಿ ಇರುವ ಮಾಹಿತಿ:

ನವಜಾತ ಶಿಶುಗಳ ಆರೈಕೆ, ಮಕ್ಕಳ ಅಪೌಷ್ಟಿಕತೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ಪುನಶ್ಚೇತನಾ ಕೇಂದ್ರಗಳನ್ನು ಸ್ಥಾಪಿಸಿರುವುದು, ಸಂಪೂರ್ಣ ಲಸಿಕೆ ಪರಿಪೂರ್ಣ ಆರೋಗ್ಯ ಧ್ಯೇಯವಾಕ್ಯದಡಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಕುರಿತ ಅಂಶಗಳ ವಿವರಣೆ, 5 ವರ್ಷದಲ್ಲಿ 7 ಬಾರಿ ಲಸಿಕೆ ತಪ್ಪದೆ ಹಾಕಿಸುವುದು, ಪೌಷ್ಟಿಕ ಆಹಾರ ಪುನಶ್ಚೇತನಾ ಕೇಂದ್ರಗಳ ಸ್ಥಾಪನೆಯ ಮೂಲಕ ಎಲ್ಲರಿಗೂ ಆರೋಗ್ಯ ಎಲ್ಲಡೆಯೂ ಆರೋಗ್ಯ, ರಕ್ತಹೀನತೆ ತಡೆಗಟ್ಟುವ ಬಗೆ, ಕ್ಷಯರೋಗದ ಲಕ್ಷಣಗಳು ಮತ್ತು ನಿಯಂತ್ರಣದ ಕ್ರಮಗಳು, ಡೆಂಗ್ಯೂ ಮತ್ತು ಚಿಕನ್ ಗುನ್ಯಾ ಲಕ್ಷಣಗಳು ಮತ್ತು ಮುನ್ನಚ್ಚೆರಿಕಾ ಕ್ರಮಗಳು, ಆರೋಗ್ಯ ಉಪ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಾದರಿಯಲ್ಲಿ ಸೌಲಭ್ಯಗಳ ಒದಗಿಸುವಿಕೆ, ಮಾನಸಿಕ ಆರೋಗ್ಯ, ಜನನಿ-ಶಿಶು ಸುರಕ್ಷಾ, ತಾಯಿ ಕಾರ್ಡ್, ಮಕ್ಕಳಿಗೆ, ಬಾಣಂತಿಯರಿಗೆ ಪೌಷ್ಟಿಕಾಂಶದ ಆಹಾರ ಸೇವನೆಯ ಕ್ರಮಗಳ ಕುರಿತ ಸಂಪೂರ್ಣ ಮಾಹಿತಿ ಒಳಗೊಂಡ ಬೃಹತ್ ಫಲಕಗಳ ಪ್ರದರ್ಶನಕ್ಕಿಡಲಾಗಿದೆ.

ಜನಾಕರ್ಷಣೀಯ ಕೇಂದ್ರವಾದ ಮಳಿಗೆ

ರಾಷ್ಟ್ರೀಯ ಫ್ಲೋರೋಸಿಸ್ ತಡೆಗಟ್ಟುವಿಕೆ ಹಾಗೂ ನಿಯಂತ್ರಣ, ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ, ಪ್ರತಿ ಜಿಲ್ಲೆಯಲ್ಲೂ ಮಾನಸಿಕ ಆರೋಗ್ಯ ಕಾರ್ಯಕ್ರಮ ತಂಡದಿಂದ 24+7 ಆರೋಗ್ಯ ಮತ್ತು ಕ್ಷೇಮ ತಂಡಗಳ ಕಾರ್ಯಾಚರಣೆ, ತಾಯಂದಿರ ಸಂಪೂರ್ಣ ವಾತ್ಸಲ್ಯ ಕಾರ್ಯಕ್ರಮ, ಮನೆಯ ಹೊರಗಡೆ ಶೌಚಾಲಯ ನಿರ್ಮಾಣ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಕುರಿತ ಮಾಹಿತಿ ಒಳಗೊಂಡ ಫಲಕಗಳನ್ನು ಈ ವಸ್ತು ಪ್ರದರ್ಶನದಲ್ಲಿ ಇಡಲಾಗಿದ್ದು, ಜನರು ಅತ್ಯಂತ ಕುತೂಹಲ ಹಾಗೂ ಆಸಕ್ತಿಯಿಂದ ವೀಕ್ಷಿಸುತ್ತಿರುವುದು ಕಂಡುಬಂತು.

ABOUT THE AUTHOR

...view details