ಹೊಸಪೇಟೆ:ಮನೆ ಮುಂದೆ ನಿಲ್ಲಿಸಿದ್ದ ಬೈಕ್ನಿಂದ ಪೆಟ್ರೋಲ್ ಕದೀಯುತ್ತಿರುವ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್ನಲ್ಲಿ ಸೆರೆ ಹಿಡಿದ್ದಾರೆ.
ಮನೆ ಮುಂದೆ ನಿಲ್ಲಿಸಿದ್ದ ಬೈಕ್ನಿಂದ ಪೆಟ್ರೋಲ್ ಕದಿಯುತ್ತಿರುವ ಖದೀಮರು: ವಿಡಿಯೋ - ಹೊಸಪೇಟೆ ಲೇಟೆಸ್ಟ್ ಕ್ರೈಂ ನ್ಯೂಸ್
ಮನೆ ಮುಂದೆ ನಿಲ್ಲಿಸಿದ್ದ ಬೈಕ್ನಿಂದ ಪೆಟ್ರೋಲ್ ಕದಿಯುತ್ತಿರುವ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್ನಲ್ಲಿ ಸೆರೆ ಹಿಡಿದ್ದಾರೆ. ಅಲ್ಲದೇ ಈ ಕೃತ್ಯಕ್ಕೆ ಚಿಕ್ಕ ಚಿಕ್ಕ ಮಕ್ಕಳನ್ನು ಸಹ ಬಳಕೆ ಮಾಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ.
ಮನೆ ಮುಂದೆ ನಿಲ್ಲಿಸಿದ್ದ ಬೈಕ್ನಲ್ಲಿ ಪೆಟ್ರೋಲ್ ಕದಿಯುತ್ತಿರುವ ಖದೀಮರು..
ಈ ಘಟನೆ ನಗರದ ಪಾಂಡುರಂಗ ಕಾಲೋನಿಯಲ್ಲಿ ನಡೆದಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಪೆಟ್ರೋಲ್ ಕಳ್ಳತನ ಮಾಡಲಾಗುತ್ತಿದೆ. ಅಲ್ಲದೇ ಈ ಕೃತ್ಯಕ್ಕೆ ಚಿಕ್ಕ ಚಿಕ್ಕ ಮಕ್ಕಳನ್ನು ಸಹ ಬಳಕೆ ಮಾಡಿಕೊಳ್ಳಲಾಗಿದೆ. ಪೊಲೀಸರಿಗೆ ತಮ್ಮ ಮೇಲೆ ಸಂಶಯ ಬಾರದಿರಲಿ ಎನ್ನುವುದು ಖದೀಮರ ಲೆಕ್ಕಾಚಾರವಾಗಿದೆ ಎಂಬುವುದು ಸ್ಥಳೀಯರ ಅಭಿಪ್ರಾಯವಾಗಿದೆ.
ದಿನದಿಂದ ದಿನಕ್ಕೆ ಪೆಟ್ರೋಲ್ ದರ ಏರಿಕೆಯಾಗುತ್ತಿದೆ. ಇದರಿಂದ ಸಾರ್ವಜನಿಕರ ಜೇಬಿಗೆ ಕತ್ತರಿ ಬೀಳುವಂತಾಗಿದ್ದು, ಪೊಲೀಸರು ಕಳ್ಳರಿಗಾಗಿ ಬಲೆ ಬೀಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.