ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಇಂದು ಪೊಲೀಸರು ದಾಳಿ ನಡೆಸಿದ್ದಾರೆ.
ಲಾಡ್ಜ್ನಲ್ಲಿನ ಅಡಗುತಾಣದಲ್ಲಿ ನಡೆಸಲಾಗುತ್ತಿತ್ತು ಎನ್ನಲಾದ ವೇಶ್ಯಾವಾಟಿಕೆಯ ಅಡ್ಡೆ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಮೂವರು ಗಿರಾಕಿಗಳು ಹಾಗೂ ದಂಧೆಯಲ್ಲಿ ಭಾಗಿಯಾಗಿದ್ದ 06 ಜನ ಸೇರಿದಂತೆ ಒಟ್ಟು 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.