ಹೊಸಪೇಟೆ :ಸುಮಾರು 3.15 ಕ್ವಿಂಟಲ್ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ತಾಲೂಕು ಭುವನಹಳ್ಳಿ ಗ್ರಾಮದ ಹೊರವಲಯದಲ್ಲಿ ಜಪ್ತಿ ಮಾಡಿದ್ದಾರೆ.
ಹೊಸಪೇಟೆ: ಕಾಳಸಂತೆಯಲ್ಲಿ ಮಾರಾಟ ಮಾಡುಲು ಸಾಗಿಸುತ್ತಿದ್ದ 3.15 ಕ್ವಿಂಟಲ್ ಪಡಿತರ ಅಕ್ಕಿ ಜಪ್ತಿ - Hospete latest news
ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Hospete
ಪಡಿತರ ಅಕ್ಕಿ ಸಾಗಿಸುತ್ತಿದ್ದ ಕಂಪ್ಲಿಯ ಮಹಾದೇವ ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಕ್ಕಿಯನ್ನು ಪಾಲಿಷ್ ಮತ್ತು ರೀಬ್ಯಾಗ್ ಮಾಡಿ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ದುರುದ್ದೇಶದಿಂದ ಸಾಗಣೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯಲ್ಲಿ ಆಹಾರ ಶಿರಸ್ತೇದಾರ್ ನಾಗರಾಜ್ .ಹೆಚ್ ಹಾಗೂ ಗಾದಿಗನೂರು ಪೊಲೀಸ್ ಠಾಣೆ ಸಿಬ್ಬಂದಿ ಇದ್ದರು. ಈ ಕುರಿತಂತೆ ಗಾದಿಗನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.