ಹೊಸಪೇಟೆ:ರೈತ ವಿರೋಧಿ ಮಸೂದೆ ತಿದ್ದುಪಡಿಯನ್ನು ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳು ನಗರದ ರೋಟರಿ ವೃತದಲ್ಲಿ ಪ್ರತಿಭಟನೆ ನಡೆಸಿದವು.
ಹೊಸಪೇಟೆ: ರೈತ ವಿರೋಧಿ ತಿದ್ದುಪಡಿಗಳ್ನು ಖಂಡಿಸಿ ಪ್ರತಿಭಟನೆ - ರೈತ ವಿರೋಧಿ ನೀತಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ. ರೈತರ ಹಿತವನ್ನು ಮರೆತಿವೆ. ಬಂಡವಾಳ ಶಾಹಿಗಳ ಪರ ಸರ್ಕಾರಗಳು ಕೆಲಸ ಮಾಡುತ್ತಿವೆ. ರೈತರಿಗೆ ಮಾರಕವಾಗುವ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ. ರೈತರ ಹಿತವನ್ನು ಮರೆತಿವೆ. ಬಂಡವಾಳ ಶಾಹಿಗಳ ಪರ ಸರ್ಕಾರಗಳು ಕೆಲಸ ಮಾಡುತ್ತಿವೆ. ರೈತರಿಗೆ ಮಾರಕವಾಗುವ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುಗ್ರೀವಾಜ್ಞೆ ಮೂಲಕ ಮಸೂದೆಗಳನ್ನು ತಿದ್ದುಪಡಿ ಮಾಡುವ ಅವಶ್ಯಕತೆ ಏನಿತ್ತು. ಒಂದು ಕಾಯ್ದೆ ಜಾರಿಗೆ ಬರಬೇಕಾದರೇ ಪ್ರಜಾಪ್ರಭುತ್ವ ಅಡಿಯಲ್ಲಿ ಚರ್ಚೆಗೆ ಒಳಗಾಗಬೇಕು. ಆದರೆ, ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ವಿರುದ್ಧ ನಡೆದುಕೊಳ್ಳುತ್ತಿದೆ. ಸರ್ಕಾರದ ಈ ನೀತಿಯನ್ನು ಖಂಡಿಸಿ ಸೆ.28 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.