ಬಳ್ಳಾರಿ: ರಸ್ತೆ ದುರಸ್ತಿ ಮತ್ತು ಚರಂಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರದಲ್ಲಿ ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಬಳ್ಳಾರಿಯಲ್ಲಿ ಮಹಾನಗರ ಪಾಲಿಕೆ ವಿರುದ್ಧ ಸಾರ್ವಜನಿಕರ ಪ್ರತಿಭಟನೆ - ಬಳ್ಳಾರಿಯಲ್ಲಿ ಮಹಾನಗರ ಪಾಲಿಕೆ ವಿರುದ್ಧ ಪ್ರತಿಭಟನೆ
ರಸ್ತೆ ದುರಸ್ತಿ ಮತ್ತು ಚರಂಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರದಲ್ಲಿ ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಸಾರ್ವಜನಿಕರ ಪ್ರತಿಭಟನೆ
ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ನಗರದ ಸಂಗಮ್ ವೃತ್ತದಿಂದ ಕೆ.ಸಿ ರಸ್ತೆಗೆ ಹೋಗುವ ಮಾರ್ಗ ಹದಗೆಟ್ಟಿದೆ. ಡ್ರೈನೇಜ್ ನೀರು ರಸ್ತೆಯ ಮೇಲೆ ಬಂದು ಜನರು ಓಡಾಡಲು ಹಿಂಸೆಯಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದರೂ ಮಹಾನಗರಪಾಲಿಕೆ ಸಮಸ್ಯೆ ನಿರ್ಲಕ್ಷ್ಯ ತೋರಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಡಾ.ಪ್ರಮೋದ್, ಗೋವಿಂದ, ಈಶ್ವರಿ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.