ಬಳ್ಳಾರಿ :ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯನ್ನು ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ 19 ದಿನಕ್ಕೆ ಕಾಲಿರಿಸಿದ್ದು, ಜಿಲ್ಲೆಯ ನಾನಾ ಕನ್ನಡಪರ, ರೈತ ಸಂಘ ಹಾಗೂ ದಲಿತ ಪರ ಸಂಘಟನೆಗಳ ಮುಖಂಡರು ಬೆಂಬಲ ಸೂಚಿಸಿದ್ದಾರೆ.
ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟಕ್ಕೆ ನಾನಾ ಸಂಘಟನೆಗಳ ಸಾಥ್ : ಅಣುಕು ಶವಯಾತ್ರೆ ಪ್ರದರ್ಶನ - ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟಕ್ಕೆ ನಾನಾ ಸಂಘಟನೆಗಳ ಸಾಥ್
ಅಖಂಡ ಬಳ್ಳಾರಿ ಜಿಲ್ಲೆಯನ್ನ ವಿಭಜನೆ ಮಾಡುವುದು ಸರಿಯಲ್ಲ. ಭಾಷಾವಾರು ವಿಂಗಡಣೆ ವೇಳೆಯಲ್ಲಿ ಬಳ್ಳಾರಿ ಜಿಲ್ಲೆಯನ್ನು ಅಖಂಡವಾಗಿಯೇ ಉಳಿಸಲಾಗಿತ್ತು. ಹೀಗಾಗಿ, ರಾಜ್ಯ ಸರ್ಕಾರ ಕೂಡಲೇ ನೂತನ ವಿಜಯನಗರ ಜಿಲ್ಲೆ ರಚನೆ ಕೈಬಿಡಬೇಕು..

ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ
ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ
ನಗರದ ಡಿಸಿ ಕಚೇರಿ ಎದುರು ಸ್ಥಾಪಿಸಲಾದ ತಾತ್ಕಾಲಿಕ ಟೆಂಟ್ನಲ್ಲಿ ನಾನಾ ಸಂಘಟನೆಗಳ ಮುಖಂಡರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಬಳಿಕ ಅಣುಕು ಶವಯಾತ್ರೆ ಮೆರವಣಿಗೆ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಖಂಡ ಬಳ್ಳಾರಿ ಜಿಲ್ಲೆಯನ್ನ ವಿಭಜನೆ ಮಾಡುವುದು ಸರಿಯಲ್ಲ. ಭಾಷಾವಾರು ವಿಂಗಡಣೆ ವೇಳೆಯಲ್ಲಿ ಬಳ್ಳಾರಿ ಜಿಲ್ಲೆಯನ್ನು ಅಖಂಡವಾಗಿಯೇ ಉಳಿಸಲಾಗಿತ್ತು. ಹೀಗಾಗಿ, ರಾಜ್ಯ ಸರ್ಕಾರ ಕೂಡಲೇ ನೂತನ ವಿಜಯನಗರ ಜಿಲ್ಲೆ ರಚನೆ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.