ಬಳ್ಳಾರಿ:ಡೊನೇಷನ್ ಹಾವಳಿಗೆ ಕಡಿವಾಣ ಸೇರಿ ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್‌ನಿಂದ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಡೊನೇಷನ್ ಹಾವಳಿ ತಡೆಗೆ ಎಐಎಸ್‌ಎಫ್ ಸಂಘಟನೆಯಿಂದ ಪ್ರತಿಭಟನೆ - ಖಾಸಗಿ ಶಿಕ್ಷಣ ಸಂಸ್ಥೆ
ಬಳ್ಳಾರಿಯಲ್ಲಿ ಡೊನೇಷನ್ ಹಾವಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಎಐಎಸ್‌ಎಫ್ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಜಿಲ್ಲೆಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾ ಅಭಿವೃದ್ಧಿ ಶುಲ್ಕ ಎಂದು ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದು ಅವ್ಯಾಹತವಾಗಿ ನಡೆಯುತ್ತಿದೆ. ಇದನ್ನು ನಿಯಂತ್ರಣ ಮಾಡುವಂತೆ ಹಲವು ಬಾರಿ ಇಲಾಖೆಗೆ ಮನವಿ ಮಾಡಿದರೂ ವರ್ಷದಿಂದ ವರ್ಷಕ್ಕೆ ಡೊನೇಷನ್ ಹಾವಳಿ ಜಾಸ್ತಿಯಾಗುತ್ತಿದೆಯೆ ವಿನಹ ಇದಕ್ಕೆ ಕಡಿವಾಣ ಬೀಳುತ್ತಿಲ್ಲ. ಜಿಲ್ಲೆಯಲ್ಲಿ ಸರ್ಕಾರಿ ವಸತಿ ನಿಲಯದಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳುವಂತೆ ಸರ್ಕಾರದ ಆದೇಶವಿದ್ದರೂ ಅಧಿಕಾರಿಗಳು ಪಾಲನೆ ಮಾಡುತ್ತಿಲ್ಲ ಎಂದು ದೂರಿದರು.
ವಸತಿ ನಿಲಯಗಳಲ್ಲಿ ಅಗತ್ಯ ಮೂಲಸೌಕರ್ಯ ಕೊರತೆ ಇದೆ. ವಿದ್ಯಾರ್ಥಿಗಳ ಸಂಪೂರ್ಣ ಸಮಸ್ಯೆಗಳಿಗೆ ಪರಿಹಾರ ನೀಡಬೇಕಂದು ಡಿಸಿಗೆ ಮನವಿ ಪತ್ರ ಸಲ್ಲಿಸಿದರು.