ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆ ಈಡೇರಿಕೆಗಾಗಿ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ - Department of Medical Education

ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ 12ನೇ ದಿನಕ್ಕೆ ಕಾಲಿಟ್ಟಿದೆ.

ಹೊಸಪೇಟೆಯಲ್ಲಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ
ಹೊಸಪೇಟೆಯಲ್ಲಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

By

Published : Oct 5, 2020, 2:50 PM IST

ಹೊಸಪೇಟೆ:ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡುವುದರ ಜತೆಗೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ‌ ನಡೆಸಲಾಯಿತು.

ರಾಜ್ಯದಲ್ಲಿ 30 ಸಾವಿರ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ಇದ್ದು, ಈ ಪೈಕಿ ಬಳ್ಳಾರಿ ಜಿಲ್ಲೆಯಲ್ಲಿ 1130 ನೌಕರರು ಇದ್ದಾರೆ. ಸುಮಾರು 15 ವರ್ಷಗಳಿಂದ ನೌಕರರು ಕೆಲಸ ಮಾಡಿಕೊಂಡು ಬರುತ್ತಿದ್ದಾರೆ.‌ ಆದರೆ ಅವರ ಸೇವೆಗಳನ್ನು ಸರ್ಕಾರಗಳು ಪರಿಗಣಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೊಸಪೇಟೆಯಲ್ಲಿ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ

ಸಮಾನ ಕೆಲಸಕ್ಕೆ ಸಮಾನ ವೇತನವನ್ನು ನೀಡಬೇಕು. ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು. ನೌಕರರ ಖಾತೆಗೆ ನೇರವಾಗಿ ವೇತನವನ್ನು ಪಾವತಿ ಮಾಡಬೇಕು. ಎಂಹೆಚ್ಎಂ ಅಡಿಯಲ್ಲಿ ಕೆಲಸ ಮಾಡುವ ನೌಕರರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಬೋನಸ್ಅ​ನ್ನು ಹೆಚ್ಚಳ ‌ಮಾಡಬೇಕು. ನೌಕರರ ಕಲ್ಯಾಣ‌ ನಿಧಿ ಅಥವಾ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಬಳಿಕ ತಹಶೀಲ್ದಾರ್ ಹೆಚ್.ವಿಶ್ವನಾಥ ಅವರಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details